ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ತಂಡವನ್ನು ಪ್ರತಿನಿಧಿಸುತಿದ್ದಾರೆ.
ಪಟ್ಟಣದ ಸಮೀಪದ ಶ್ರೀರಾಮನಗರ ನಿವಾಸಿಗಳಾದ ರಾಘವೇಂದ್ರ ಮತ್ತು ಮಂಜುಳಾ ದಂಪತಿಗಳ ಪುತ್ರನಾದ ಆಯುಷ್ ಸರ್ಕಾರಿ ಪ್ರೌಡ ಶಾಲೆಯಲ್ಲಿ ಒಂಬತ್ತನೆ ತರಗತಿ ವ್ಯಾಸಂಗ ಮಾಡುತಿದ್ದಾರೆ.
ತೀರ್ಥಹಳ್ಳಿ ರಸ್ತೆಯ ಪ್ರಗತಿ ನಗರ ನಿವಾಸಿಗಳಾದ ತಿಮ್ಮಪ್ಪ ಶೆಟ್ಟಿ ಮತ್ತು ಜ್ಯೋತಿ ದಂಪತಿಗಳ ಅವಳಿ ಪುತ್ರರಾದ ನಿತೀಶ್ ಟಿ ಮತ್ತು ನಿತಿನ್ ಟಿ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹತ್ತನೆ ತರಗತಿ ವ್ಯಾಸಂಗ ಮಾಡುತಿದ್ದಾರೆ.
ಪಟ್ಟಣದ ಸಮೀಪದ ಆನೆಕೆರೆ ನಿವಾಸಿಗಳಾದ ಕೃಷ್ಣ ಮತ್ತು ಸುಶೀಲಾ ದಂಪತಿಗಳ ಪುತ್ರ ಅರ್ಜುನ್ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹತ್ತನೆ ತರಗತಿ ವ್ಯಾಸಂಗ ಮಾಡುತಿದ್ದಾರೆ.
ಪಟ್ಟಣದ ಸಮೀಪದ ಬಾಳೂರು ನಿವಾಸಿಗಳಾದ ವೆಂಕಟೇಶ್ ಮತ್ತು ಪಾರ್ವತಿ ಪುತ್ರ ಲೋಕೇಶ್ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹತ್ತನೆ ತರಗತಿ ವ್ಯಾಸಂಗ ಮಾಡುತಿದ್ದು ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಪ್ರತಿಮ ಸಾಧನೆಯ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಯುವ ಪ್ರತಿಭೆಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಶಾಂತ್ ಹೆಚ್ ವಿ ,ಉಪ ಪ್ರಾಚಾರ್ಯರಾದ ಕೆಸಿನ ಮನೆ ರತ್ನಾಕರ್ ಮತ್ತು ಶಾಲಾ ಆಡಳಿತ ಮಂಡಳಿ, ಸಹ ಶಿಕ್ಷಕರು ಹಾಗೂ ಪೋಷಕರು ದೈಹಿಕ ಶಿಕ್ಷಕರು ಮತ್ತು ಪಟ್ಟಣದ ಸಂಘ ಸಂಸ್ಥೆಗಳು ಅಭಿನಂದನೆ ಸಲ್ಲಿಸಿರುತ್ತಾರೆ.