ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಾದ ಆಯುಷ್ ಮತ್ತು ಅನೀಶ್ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ಆಯುಷ್ 800 ಮೀ ಹಾಗೂ 1500 ಮೀ ಓಟ ಸ್ಪರ್ದೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.




7 ನೇ ತರಗತಿಯ ಅನೀಶ್ 100 ಮೀ ಓಟದಲ್ಲಿ ಎರಡನೇ ಸ್ಥಾನ ಪಡೆದು ಮುಂದಿನ ತಿಂಗಳು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ತಂಡವನ್ನು ಪ್ರತಿನಿಧಿಸುತಿದ್ದಾರೆ.

ಪಟ್ಟಣದ ಸಮೀಪದ ಹಾಲುಗುಡ್ಡೆ ನಿವಾಸಿಗಳಾದ ರಾಜೇಶ್ ಗೌಡ ಮತ್ತು ಶಿಲ್ಪಾ ದಂಪತಿಗಳ ಪುತ್ರನಾದ ಆಯುಷ್ ಶಾರದ ಶಾಲೆಯಲ್ಲಿ ಹತ್ತನೆ ತರಗತಿ ವ್ಯಾಸಂಗ ಮಾಡುತಿದ್ದಾರೆ.

ಚಂದಳ್ಳಿ ನಿವಾಸಿಗಳಾದ ವೀರೇಶ್ ಮತ್ತು ಸುಮಾ ದಂಪತಿಗಳ ಪುತ್ರ ಅನೀಶ್ ರಾಮಕೃಷ್ಣ ವಿದ್ಯಾಲಯದಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತಿದ್ದಾರೆ.




ಜಾವೆಲಿನ್ ವಿಭಾಗದಲ್ಲಿ 3 ನೇ ಸ್ಥಾನ

17 ವರ್ಷದ ಬಾಲಕಿಯರ ಜಾವೆಲಿನ್ ವಿಭಾಗದಲ್ಲಿ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿ ಖುಷಿ ಮೂರನೇ ಸ್ಥಾನ ಪಡೆದಿದ್ದಾರೆ.

ಹೆದ್ದಾರಿಪುರ ನಿವಾಸಿಗಳಾದ ಗುರು ಮತ್ತು ನಯನ ದಂಪತಿಗಳ ಪುತ್ರಿ ಖುಷಿ ರಾಮಕೃಷ್ಣ ವಿದ್ಯಾಲಯದಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತಿದ್ದಾರೆ.




ಅಪ್ರತಿಮ ಸಾಧನೆಯ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಯುವ ಪ್ರತಿಭೆಗೆ ಶ್ರೀ ರಾಮಕೃಷ್ಣ ಮಹಾವಿದ್ಯಾಲಯದ ಮುಖ್ಯಸ್ಥರಾದ ದೇವರಾಜ್ ,ದೈಹಿಕ ಶಿಕ್ಷಕರಾದ ವಿನಯ್ ಮತ್ತು ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಪೋಷಕರು ದೈಹಿಕ ಶಿಕ್ಷಕರು ಮತ್ತು ಪಟ್ಟಣದ ಸಂಘ ಸಂಸ್ಥೆಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

12 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

13 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

17 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

17 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

17 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

17 hours ago