ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ.




ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಮೂವರು ಗೈರುಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವಿಶ್ವಾಸ ಗೊತ್ತುವಳಿ ಯನ್ನು ಮೂರನೇ ಎರಡು ಬಹುಮತದೊಂದಿಗೆ ಅಂಗೀಕರಿಸಲಾಯಿತು.

ಇದರಿಂದ ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ 19 ತಿಂಗಳು ಆಡಳಿತ ನಡೆಸಿದ ವನಿತಾ ಗಂಗಾಧರ್ ಅಧ್ಯಕ್ಷ ಹುದ್ದೆ ಕಳೆದುಕೊಂಡ ಹಿನ್ನೆಲೆಯಲ್ಲಿ  ಆಡಳಿತಕ್ಕೆ ಪೂರ್ಣ ವಿರಾಮ ಬಿದ್ದಿದೆ.




ವನಿತಾ ಗಂಗಾಧರ್ 2021ರ ಫೆಬ್ರವರಿ ತಿಂಗಳಲ್ಲಿ ಹೆದ್ದಾರಿಪುರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಸದಸ್ಯರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಅಧ್ಯಕ್ಷರು ಸ್ಪಂದಿಸುತ್ತಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಅದು ತಾರಕಕ್ಕೇರಿ ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರು ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ತಿಂಗಳ ಹಿಂದೆ ಮೇಲಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು.




ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಬಿಜೆಪಿಯ ನಾಲ್ವರು ಸದಸ್ಯರು ಅವಿಶ್ವಾಸ ವ್ಯಕ್ತಪಡಿಸಿರುವುದು ವಿಶೇಷವಾಗಿದ್ದು,ಪಕ್ಷದ ಮುಖಂಡರು ಏನು ಶಿಸ್ತು ಕ್ರಮ ಕೈಗೊಳ್ಳುತ್ತಾರೆ ಎಂಬುವುದನ್ನು ಕಾದುನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 hour ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 hour ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 hour ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

7 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

8 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago