ಆಗುಂಬೆ ಹೊನ್ನೇತಾಳು ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ.
ಚಿತ್ರದುರ್ಗದಿಂದ ಜಮೀನ್ದಾರ್ ರೊಬ್ಬರ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಪಾರ್ವತಮ್ಮ ಎಂಬುವರು ಶವವಾಗಿ ಪತ್ತೆಯಾಗಿದ್ದಾರೆ. ಇದನ್ನು ಕೊಲೆ ಎಂದು ಬಣ್ಣಿಸಲಾಗುತ್ತಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾರ್ವತಿ (45) ಮೃತ ಮಹಿಳೆ. ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಪಾರ್ವತಿ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ.