ಆಸ್ತಿಯಲ್ಲಿ ಪಾಲು ಕೊಡದೇ ಎರಡನೇ ಮದುವೆಯಾದ ಅಪ್ಪ – ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಕ್ಕಳು|Murder mystery

ಆಸ್ತಿಯಲ್ಲಿ ಪಾಲು ಕೊಡದೆ, ಎರಡನೇ ಮದುವೆಯಾಗಿ ಮಗು ಮಾಡಿಕೊಂಡ ಅಪ್ಪನನ್ನು ಮೂವರು ಮಕ್ಕಳೇ ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.




ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ನ. 29ರಂದು ಕೆಎಸ್‌ಆರ್‌ಪಿಯ ನಿವೃತ್ತ ಎಸ್‌ಐ ನಾಗೇಂದ್ರಪ್ಪ ಎಂಬವರ ಶವ ಚರಂಡಿಯಲ್ಲಿ ಸಿಕ್ಕಿತ್ತು. ಇವರು ಶಿರಾಳಕೊಪ್ಪದ ಬೋವಿ ಗ್ರಾಮದವರು. ಆಸ್ತಿ ವಿಚಾರದಲ್ಲಿ ಕೊಲೆ ಶಂಕಿಸಿದ್ದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕಂಬಿ ಎಣಿಸುವಂತೆ
ಮಾಡಿದ್ದಾರೆ.

ಬೋವಿ ಗ್ರಾಮದ ರಿಜ್ವಾನ್, ಹಬೀಬುಲ್ಲಾ, ಸುಹೇಲ್ ಎಂಬವರಿಂದ ಕೊಲೆ ನಡೆದಿದೆ. ಭದ್ರಾವತಿ ಕೋರ್ಟ್‌ಗೆ ಹೋಗಿ ಶಿಕಾರಿಪುರಕ್ಕೆ ಬಂದಿದ್ದ ನಾಗೇಂದ್ರಪ್ಪ ಅವರನ್ನು ತಮ್ಮ ಆಟೋದಲ್ಲಿ ಹತ್ತಿಸಿಕೊಂಡಿದ್ದ ಆರೋಪಿಗಳು ಪುಣೀದಹಳ್ಳಿ ಗ್ರಾಮದ ಬಳಿ ಕರೆದೊಯ್ದು ಬಲವಂತದಿಂದ ನಶೆ ಬರುವ ಔಷಧಿ ಕುಡಿಸಿದ್ದರು. ನಂತರ ಉಸಿರುಗಟ್ಟಿಸಿ ಸಾಯಿಸಿ ಅದೇ ಆಟೋದಲ್ಲಿ ಶವ ಸಾಗಿಸಿ ಉಡುಗಣಿ ಗ್ರಾಮದಿಂದ ಕುಸೂರು ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದಲ್ಲಿನ ಚರಂಡಿಗೆ ಬಿಸಾಡಿದ್ದರು.




ಇದಕ್ಕೂ ಮುನ್ನ ನ.9ರಂದು ಸಹ ಅವರ ಕೊಲೆ ಯತ್ನ ನಡೆದಿತ್ತು. ಲಗೇಜ್ ಆಟೋದಿಂದ ನಾಗೇಂದ್ರಪ್ಪರ ಬೈಕಿಗೆ ಡಿಕ್ಕಿ ಹೊಡಿಸಲಾಗಿತ್ತು. ನಾಗೇಂದ್ರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನೆ ಬಗ್ಗೆ ದೂರು ಸಹ ದಾಖಲಾಗಿರಲಿಲ್ಲ. ನಾಗೇಂದ್ರಪ್ಪನವರಿಗೆ ಐದೂವರೆ ಎಕರೆ ಭೂಮಿಯಿದ್ದು, ಉತ್ತಮ ಫಸಲು ಬರುತ್ತಿತ್ತು. ಐವರು ಮಕ್ಕಳಿದ್ದ ನಾಗೇಂದ್ರಪ್ಪ, ಪತ್ನಿ ನಿಧನಗೊಂಡಿದ್ದರಿಂದ ಎರಡು ವರ್ಷಗಳ ಹಿಂದೆ ವಿಧವೆಯೊಬ್ಬರನ್ನು ಮದುವೆಯಾಗಿದ್ದರು. ಮಕ್ಕಳೇ ನಿಂತು ಮದುವೆ ಮಾಡಿಸಿದ್ದರು. ಎರಡನೇ ಮದುವೆಯಿಂದ ಗಂಡು ಮಗು ಜನಿಸಿತ್ತು. ತಮಗೆ ಆಸ್ತಿ ಪಾಲು ಮಾಡಿಕೊಡುವಂತೆ ಮೊದಲ ಹೆಂಡತಿ, ಮಕ್ಕಳು ನಾಗೇಂದ್ರಪ್ಪನಿಗೆ ದುಂಬಾಲು ಬಿದ್ದಿದ್ದರು. ನಾಗೇಂದ್ರಪ್ಪ ಆಸ್ತಿ ಪಾಲಿಗೆ ನಿರಾಕರಿಸಿದ್ದರು.




ಊರಲ್ಲಿ ನ್ಯಾಯ ಪಂಚಾಯಿತಿ ನಡೆದು, ಐದೂವರೆ ಎಕರೆ ಜಾಗದಲ್ಲಿ ಪಾಲು ಮಾಡುವ ಸಂಧಾನ ನಡೆದಿತ್ತು. ಆದರೆ ನಾಗೇಂದ್ರಪ್ಪ ಸಂಧಾನಕ್ಕೆ ಒಪ್ಪಿರಲಿಲ್ಲ. ಮಗ ಉಮೇಶ್ ಭದ್ರಾವತಿ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ದಾವೆ ವಿಚಾರಣೆ ನಡೆದಿತ್ತು. ಅಪ್ಪನ ಹಠದಿಂದ ಸಿಟ್ಟಾಗಿದ್ದ ಮಂಜುನಾಥ್, ಉಮೇಶ್, ಅಪ್ಪನನ್ನೇ ಮುಗಿಸಲು ಯೋಜನೆ ಹಾಕಿದ್ದರು. ಬೋಗಿ ಗ್ರಾಮದ ಮೂವರಿಗೆ ತಂದೆಯ ಕೊಲೆಗೆ ಸುಪಾರಿ ನೀಡಿ, ಅಪ್ಪನನ್ನು ಕೊಂದು, ಹುಗಿದರೆ ಐದು ಲಕ್ಷ ಕೊಡುವ ವಾಗ್ದಾನ ಮಾಡಿದ್ದರು. ಅದರಂತೆ ಕೊಲೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

12 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

12 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

12 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

17 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

19 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago