ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ ಬುಧವಾರ ಕಲಿಕಾ ಹಬ್ಬ ಯೋಜನೆಯ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಶಿಬಿರ  ಉದ್ಘಾಟಿಸಿ ಮಾತನಾಡಿದ ಅವರು ಸಂತಸದಾಯಕ ಕಲಿಕೆ ಮಕ್ಕಳಲ್ಲಿ ಮೂಡಿಸ ಲಾಗುತ್ತಿದೆ,ಮಕ್ಕಳು ಎಲ್ಲಾ ಬಗೆಯ ಜ್ಞಾನವನ್ನು ಆಪ್ತತೆ ಯಿಂದ ಕಲಿತು ಅಭಿವ್ಯಕ್ತಿ ಪಡಿಸಿದಾಗ ಹೆಚ್ಚು ಗುಣಾತ್ಮಕ ಕಲಿಕೆ ಸಾಧ್ಯ ಎಂದರು.


ಮಕ್ಕಳು ಕೇವಲ ಮನೆಯ ವಾತಾವರಣಕ್ಕೆ ಹೊಂದಿಕೊಂಡು ಕಲಿಕೆಯಿಂದ ದೂರಾಗಿದ್ದರು. ಅದು ಗ್ರಾಮೀಣ ಮಟ್ಟದ ಮಕ್ಕಳ ಕಲಿಕೆಗೆ ಅನೇಕ ತೊಂದರೆಗಳು ಉಂಟಾಗಿದ್ದವು. ಭೌತಿಕವಾಗಿ ತರಗತಿಗಳು ನಿರ್ವಹಣೆಯಾಗದೆ ಮಕ್ಕಳ ಕಲಿಕಾ ಸಾಮರ್ಥ್ಯ ಕುಂಠಿತಗೊಂಡಿತು. ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ಪ್ರಾರಂಭಗೊಂಡಾಗಿನಿಂದ ಅನೇಕ ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದ ಮೂಲಕ ವಿವಿಧ ಆಯಾಮಗಳಿಂದ ಕಾರ್ಯ ಚಟುವಟಿಕೆಗಳನ್ನು ಪ್ರಾರಂಭಿಸಿದ್ದೇವೆ ಎಂದರು.

ಡಿ.ವೈ.ಪಿ.ಸಿ. ಉಮಾಮಹೇಶ ಮಾತನಾಡಿ ಶಿಕ್ಷಣ ಇಲಾಖೆಯು ನಿಗದಿಪಡಿಸಿರುವ ಕಲಿಕಾ  ಸಾಮರ್ಥ್ಯಗಳನ್ನು ತರಗತಿ ಕೊನೆಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಕಾರ್ಯಪ್ರವೃತ್ತರಾಗಿದ್ದಾರೆ. ಅದೇ ರೀತಿಯಲ್ಲಿ ಪ್ರತಿಯೊಂದು ಸರ್ಕಾರಿ ಶಾಲೆಗಳಿಗೆ ಅತ್ಯಂತ ಕಡು ಬಡತನದ ಮಕ್ಕಳು ಶಾಲೆಗೆ ಬರುವುದರಿಂದ ಶಿಕ್ಷಕರು ಹೆಚ್ಚಿನ ಕಾಳಜಿವಹಿಸಿ ಉತ್ತಮ ಶಿಕ್ಷಣ ನೀಡುವಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಹೇಳಿದರು.

ಹೊಸನಗರ ತಾಲೂಕು ಬಿಇಒ ಕೃಷ್ಣಮೂರ್ತಿ ಹಾಗೂ ಉಪ ಪ್ರಾಚಾರ್ಯ ಕೆಸಿನಮನೆ ರತ್ನಾಕರ್ ಹಾಗೂ ರಾಜ್ಯ ತರಬೇತಿ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

ಮೂರು ದಿನಗಳ ಈ ತರಬೇತಿಗೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಒಟ್ಟು 125 ಕ್ಕೂ ಅಧಿಕ ಶಿಕ್ಷಕರು  ಅಗಮಿಸಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

6 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

7 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

8 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

8 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

1 day ago