Headlines

ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹರಿದ ಟಿಪ್ಪರ್ ಲಾರಿ – ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ|CCTV

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ನಿನ್ನೆ ಬೆಳಗ್ಗೆಯೇ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ.




ಈ ಅಪಘಾತದಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಪ್ರತಿಮಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. 


ಇದೀಗ ಘಟನೆಯ ಸಿಸಿ ಟಿವಿ ದೃಶ್ಯವೊಂದು ಲಭ್ಯವಾಗಿದ್ದು, ದೃಶ್ಯದಲ್ಲಿ ಟ್ರಾಫಿಕ್​ನ ನಡುವೆ ಎಡಬದಿಯಲ್ಲಿ ನುಗ್ಗಿ ಬಂದ ಲಾರಿ, ತಮ್ಮ ಪಾಡಿಗೆ ರಸ್ತೆ ಬದಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿರುವ ದೃಶ್ಯ  ಸೆರಯಾಗಿದೆ.




Leave a Reply

Your email address will not be published. Required fields are marked *