Headlines

ಕೋಡೂರು ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|Accident

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕೋಡೂರು ಸಮೀಪದ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ.




ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಗ್ರಾಮದ ಸೇತುವೆ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ರಿಪ್ಪನ್‌ಪೇಟೆ ಕಡೆಯಿಂದ ಅಕ್ಕಿ ತುಂಬಿಕೊಂಡು ಹೋಗುತಿದ್ದ ಲಾರಿ ಹಾಗೂ ಹೊಸನಗರ ಕಡೆಯಿಂದ ಬರುತಿದ್ದ ಖಾಲಿ ಲಾರಿ ನಡುವೆ ಡಿಕ್ಕಿಯಾಗಿದ್ದು,ಆಟೋವೊಂದನ್ನು ಓವರ್ ಟೇಕ್ ಮಾಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ.




ಲಾರಿ ಚಾಲಕನೊಬ್ಬನಿಗೆ ಗಾಯಗಳಾಗಿದ್ದು ಆತನನ್ನು ಹೊಸನಗರದ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಈ ಅಪಘಾತದಿಂದ ವಾಹನ ಸಂಚಾರಕ್ಕೆ ವ್ಯತ್ಯಯವುಂಟಾಗಿದ್ದು,ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





ಮಾಹಿತಿ : ದೀಕ್ಷಿತ್ 

About The Author

Leave a Reply

Your email address will not be published. Required fields are marked *