Headlines

ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು.

ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು.


ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು ಅಪರಾಧಗಳು ನಡೆಯುತ್ತಿದ್ದು, ಇದಕ್ಕೆ ಕಾನೂನಿನ ಅರಿವಿನ ಕೊರತೆಯೇ ಪ್ರಮುಖ ಕಾರಣವಾಗಿದೆ. ವಿದ್ಯಾರ್ಥಿ, ಯುವಕರಿಂದ ಹಿಡಿದು ಪ್ರತಿಯೊಬ್ಬ ನಾಗರಿಕನೂ ಈ ದೇಶದಲ್ಲಿ ಪ್ರಸ್ತುತ ಇರುವ ಕಾನೂನುಗಳನ್ನು ತಿಳಿದುಕೊಳ್ಳಬೇಕು. ಕಾನೂನಿಗಳ ತಿಳುವಳಿಕೆ ಮತ್ತು ಮೌಲ್ಯಯುತ ಶಿಕ್ಷಣವನ್ನು ಪಡೆಯುವುದರಿಂದ ಅಪರಾಧಗಳನ್ನು ತಡೆಯಬಹುದು. ಈ ದೇಶದ ಕಾನೂನಿಗೆ ವಿರುದ್ಧವಾದ ಯಾವುದೇ ಪ್ರಕರಣಗಳು ನಡೆದರೆ, ಅಥವಾ ಕಂಡುಬಂದರೆ ಸಾರ್ವಜನಿಕರು ಯಾವುದೇ ನಿರ್ಭಯವಿಲ್ಲದೆ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದರು.




ಪೋಕ್ಸೋ ಕಾಯಿದೆ ಬಗ್ಗೆ ಮಾತನಾಡಿದ ಅವರು ಹದಿಹರೆಯದ ಯುವಕರಾಗಲೀ ಅಥವಾ ನಾಗರೀಕರಾಗಲೀ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ದುರ್ಬಳಕೆ ಪಡಿಸಿಕೊಂಡರೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಅರಿವು ಮೂಡಿಸುವುದರ ಮೂಲಕ ಜಾಗೃತಗೊಳಿಸ ಬೇಕಾಗಿದೆ ಎಂದು ತಿಳಿಸಿದರು.

ಇದೇ ಸಂಧರ್ಭದಲ್ಲಿ ಕರ್ಕಶ ಶಬ್ದದಿಂದ ಸಾರ್ವಜನಿಕ ಶಾಂತಿ ಕದಡುವಂತಹ ದ್ವಿಚಕ್ರ ವಾಹನಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದಾಗ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.




ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ಮತ್ತು ಪಟ್ಟಣದ ಮುಖಂಡರು ಮತ್ತು ಅಂಗಡಿ ವರ್ತಕರು ಇದ್ದರು.

ಪಟ್ಟಣದಲ್ಲಿ ನೂತನ ಪಾರ್ಕಿಂಗ್ ನೀತಿ :




ಪಟ್ಟಣದಲ್ಲಿ ಸಂಚಾರದಟ್ಟಣೆ ಸಮಸ್ಯೆಯ ಬಗ್ಗೆ ಜನರಿಂದಲೂ ಕೇಳಿದ್ದೇನೆ. ಪಟ್ಟಣ ದೊಡ್ಡದಾಗಿ ಬೆಳೆದಿದೆ. ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದೆ. ಹೀಗಾಗಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ ಈ ಹಿನ್ನಲೆಯಲ್ಲಿ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ದಿನ ಬಿಟ್ಟು ದಿನ ಬಲ ಮತ್ತು ಎಡ ಭಾಗದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ಕೊಡುವ ಪಾರ್ಕಿಂಗ್ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Leave a Reply

Your email address will not be published. Required fields are marked *