ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು.

ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು.


ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು ಅಪರಾಧಗಳು ನಡೆಯುತ್ತಿದ್ದು, ಇದಕ್ಕೆ ಕಾನೂನಿನ ಅರಿವಿನ ಕೊರತೆಯೇ ಪ್ರಮುಖ ಕಾರಣವಾಗಿದೆ. ವಿದ್ಯಾರ್ಥಿ, ಯುವಕರಿಂದ ಹಿಡಿದು ಪ್ರತಿಯೊಬ್ಬ ನಾಗರಿಕನೂ ಈ ದೇಶದಲ್ಲಿ ಪ್ರಸ್ತುತ ಇರುವ ಕಾನೂನುಗಳನ್ನು ತಿಳಿದುಕೊಳ್ಳಬೇಕು. ಕಾನೂನಿಗಳ ತಿಳುವಳಿಕೆ ಮತ್ತು ಮೌಲ್ಯಯುತ ಶಿಕ್ಷಣವನ್ನು ಪಡೆಯುವುದರಿಂದ ಅಪರಾಧಗಳನ್ನು ತಡೆಯಬಹುದು. ಈ ದೇಶದ ಕಾನೂನಿಗೆ ವಿರುದ್ಧವಾದ ಯಾವುದೇ ಪ್ರಕರಣಗಳು ನಡೆದರೆ, ಅಥವಾ ಕಂಡುಬಂದರೆ ಸಾರ್ವಜನಿಕರು ಯಾವುದೇ ನಿರ್ಭಯವಿಲ್ಲದೆ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದರು.




ಪೋಕ್ಸೋ ಕಾಯಿದೆ ಬಗ್ಗೆ ಮಾತನಾಡಿದ ಅವರು ಹದಿಹರೆಯದ ಯುವಕರಾಗಲೀ ಅಥವಾ ನಾಗರೀಕರಾಗಲೀ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ದುರ್ಬಳಕೆ ಪಡಿಸಿಕೊಂಡರೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಅರಿವು ಮೂಡಿಸುವುದರ ಮೂಲಕ ಜಾಗೃತಗೊಳಿಸ ಬೇಕಾಗಿದೆ ಎಂದು ತಿಳಿಸಿದರು.

ಇದೇ ಸಂಧರ್ಭದಲ್ಲಿ ಕರ್ಕಶ ಶಬ್ದದಿಂದ ಸಾರ್ವಜನಿಕ ಶಾಂತಿ ಕದಡುವಂತಹ ದ್ವಿಚಕ್ರ ವಾಹನಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದಾಗ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.




ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ಮತ್ತು ಪಟ್ಟಣದ ಮುಖಂಡರು ಮತ್ತು ಅಂಗಡಿ ವರ್ತಕರು ಇದ್ದರು.

ಪಟ್ಟಣದಲ್ಲಿ ನೂತನ ಪಾರ್ಕಿಂಗ್ ನೀತಿ :




ಪಟ್ಟಣದಲ್ಲಿ ಸಂಚಾರದಟ್ಟಣೆ ಸಮಸ್ಯೆಯ ಬಗ್ಗೆ ಜನರಿಂದಲೂ ಕೇಳಿದ್ದೇನೆ. ಪಟ್ಟಣ ದೊಡ್ಡದಾಗಿ ಬೆಳೆದಿದೆ. ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದೆ. ಹೀಗಾಗಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ ಈ ಹಿನ್ನಲೆಯಲ್ಲಿ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ದಿನ ಬಿಟ್ಟು ದಿನ ಬಲ ಮತ್ತು ಎಡ ಭಾಗದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ ಕೊಡುವ ಪಾರ್ಕಿಂಗ್ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

8 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

9 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

9 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

10 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

1 day ago