ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಮಹಿಳೆ ಪರಾರಿ : ಮಕ್ಕಳನ್ನು ಹುಡುಕಿಕೊಡುವಂತೆ ಪತಿಯಿಂದ ಕಣ್ಣೀರು|missing

ಪತಿಯನ್ನು ಬಿಟ್ಟು ತಾನು ಕೆಲಸ ನಿರ್ವಹಿಸುತಿದ್ದ ಸಂಸ್ಥೆಯ ಚಾಲಕನೊಂದಿಗೆ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು ಹಾಕುತ್ತಿದ್ದಾರೆ.
ಶಿಕಾರಿಪುರ ತಾಲೂಕಿನ ಪುಣೇದಹಳ್ಳೀ ಗ್ರಾಮದಲ್ಲಿ ಪರಶುರಾಮ್ ಮತ್ತು ಶಾರದಾ ದಂಪತಿ ವಾಸವಾಗಿದ್ದರು. ಕಳೆದ 13 ವರ್ಷದ ಹಿಂದೆ  ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದು ಪತ್ನಿ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಮಕ್ಕಳ ದಾಖಲಾತಿಗಳನ್ನು ತೆಗೆದುಕೊಂಡು ಶಾಲೆಗೆ ಹೋಗಿದ್ದ ಮಹಿಳೆ ಅಲ್ಲಿಂದ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ಅವರ ಸುಳಿವು ಸಿಕ್ಕಿಲ್ಲ ಸದ್ಯ ಪತಿ ಮತ್ತು ಆತನ ಕುಟುಂಬಸ್ಥರು ಘಟನೆಯಿಂದ ಬೇಸತ್ತು ಕಣ್ಣೀರು ಹಾಕುತ್ತಿದ್ದಾರೆ.
ಪತ್ನಿ ಬರದೇ ಇದ್ದರೂ ಪರವಾಗಿಲ್ಲ. ಮುದ್ದಾದ ಎರಡು ಗಂಡು ಮಕ್ಕಳಾದ್ರೂ ವಾಪಸ್ ಮನೆಗೆ ಬರಬೇಕು. ಅವರ ಭವಿಷ್ಯ ದೃಷ್ಟಿಯಿಂದ ಇಬ್ಬರು ಗಂಡು ಮಕ್ಕಳನ್ನು ಪತ್ತೆ ಮಾಡಿ ಕೊಡಿ ಅಂತಾ ಪತಿ ಪರಶುರಾಮ್ ಮತ್ತು ಅಜ್ಜಿ ಮಂಜಮ್ಮ ಕಣ್ನೀರು ಹಾಕಿದ್ದಾರೆ.
ಶಿಕಾರಿಪುರ ಖಾಸಗಿ ಶಾಲೆಯಲ್ಲಿ ಚಾಲಕನಾಗಿದ್ದ ಹನುಮಂತಪ್ಪ. ಶಾರದಾ ಮತ್ತು ಹನುಮಂತಪ್ಪ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ಇಬ್ಬರಿಗೂ ಪರಸ್ಪರ ಪರಿಚಯವಾಗಿದೆ. ಹನುಮಂತಪ್ಪ ಶಿಕಾರಿಪುರದ ಶಿರಾಳಕೊಪ್ಪದ ನಿವಾಸಿ ಅಗಿದ್ದಾನೆ. ಹನುಮಂತಪ್ಪ ಮದುವೆಯಾಗಿ 18 ವರ್ಷವಾಗಿದೆ.

ಮಕ್ಕಳು ಆಗಿಲ್ಲ. ಈ ನಡುವೆ ಪತ್ನಿಯನ್ನು ಬಿಟ್ಟು ಹನುಮಂತಪ್ಪನು ಶಾರದಾ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು ಎಂಬ ಆರೋಪ ಕೇಳಿ ಬಂದಿದೆ. ಇಬ್ಬರು ಸೇರಿ ಪ್ಲ್ಯಾನ್ ಮಾಡಿಕೊಂಡು ಮನೆಯಿಂದ ಎಸ್ಕೇಪ್ ಆಗಿದ್ದಾರೆ. ಶಾರದಾ ಎರಡು ಮಕ್ಕಳನ್ನು ಜೊತೆಗೆ ಕರೆದುಕೊಂಡು ಚಾಲಕನ ಜೊತೆ ಎಸ್ಕೇಪ್ ಆಗಿದ್ದಾಳೆ.

ಸದ್ಯ ಇಬ್ಬರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎನ್ನುವ ಮಾಹಿತಿ ಇದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪತ್ನಿ ಮತ್ತು ಮಕ್ಕಳು ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ. ಇತ್ತ ಹನುಮಂತಪ್ಪ ಪತ್ನಿಗೆ ಕೈಕೊಟ್ಟು ಓಡಿ ಹೋಗಿದ್ದರಿಂದ ಅವರ ಕುಟುಂಬಸ್ಥರು ಸದ್ಯ ಕಣ್ಣೀರು ಹಾಕುತ್ತಿದ್ದಾರೆ.

ಹೀಗೆ ಎರಡು ಕುಟುಂಬಕ್ಕೆ ಶಾರದಾ ಮತ್ತು ಪರಶುರಾಮ್ ವಂಚನೆ ಮಾಡಿದ್ದಾರೆ. ಎರಡು ಗಂಡು ಮಕ್ಕಳ ಜೊತೆ ತಾಯಿಯು ಮನೆಯಿಂದ ಚಾಲಕ ಪರಶುರಾಮ್ ಜೊತೆ ಎಸ್ಕೇಪ್ ಆಗಿದ್ದಾಳೆ. ಸದ್ಯ ಎರಡು ಗಂಡು ಮಕ್ಕಳಿಗಾಗಿ ತಂದೆ ಮತ್ತು ಕುಟುಂಬಸ್ಥರು ಪರದಾಡುತ್ತಿದ್ದಾರೆ. ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡ ಶಿಕಾರಿಪುರ ಗ್ರಾಮಾಂತರ ಪೊಲೀಸರು ಮಾತ್ರ ಶಾರದಾ ಮತ್ತು ಮಕ್ಕಳನ್ನು ಪತ್ತೆ ಮಾಡುವಲ್ಲಿ ವಿಫಲರಾಗಿದ್ದಾರೆ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

6 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

23 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago