ತುಂಗಾ ನದಿಯ ತೀರದಲ್ಲಿ ವಿಜೃಂಭಣೆಯ ತೆಪ್ಪೋತ್ಸವ – ಸಡಗರದ ಸಂಭ್ರಮಕ್ಕೆ ಸಾಕ್ಷಿಯಾದ ಸಾವಿರಾರು ಜನ|thirthahalli

ತೀರ್ಥಹಳ್ಳಿ: ತುಂಗಾ ನದಿಯ ದಂಡೆಯ  ಮೇಲಿನಿಂದ ಸಿಡಿದ ಸಿಡಿಮದ್ದುಗಳು ವರ್ಣರಂಜಿತವಾಗಿ ಮುಗಿಲಿಗೆ ಅಪ್ಪಳಿಸಿದವು. ಮರಳು ದಿಬ್ಬದ ಮೇಲೆ ಹಾತೊರೆದು ಕುಳಿತಿದ್ದ ಜನತೆ ಕೇಕೆ ಹಾಕಿದರು.




ಶ್ರೀ ರಾಮೇಶ್ವರ ಎಳ್ಳಾಮಾವಾಸ್ಯೆ ಜಾತ್ರೆಯ ಕೊನೆಯ ದಿನವಾದ ಭಾನುವಾರ ತುಂಗಾನದಿಯಲ್ಲಿ ದೇವರ ತೆಪ್ಪೋತ್ಸವ ಜನಾಕರ್ಷಣೆಯ ಕೇಂದ್ರ ಬಿಂದುವಾಯಿತು. ತೆಪ್ಪೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಜನ ಸಾಗರವೇ ಹರಿದು ಬಂದಿತ್ತು. ತುಂಗಾ ನದಿಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಮೂರು ಸುತ್ತು ನದಿಯಲ್ಲಿ ತಿರುಗಿಸಿ ಪೂಜೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ತಮಿಳುನಾಡಿನ ಶಿವಕಾಶಿಯ ಪರಿಣಿತರ ತಂಡದಿಂದ ಸಿಡಿಮದ್ದಿನ ಬಣ್ಣದ ಲೋಕವನ್ನೇ ಸೃಷ್ಟಿಸಿದ್ದರು. ನದಿಯ ಇಕ್ಕೆಲಗಳಲ್ಲಿ ಸಾವಿರಾರು ಹಣತೆಗಳು ತೇಲಿದವು. ಮತ್ತೊಂದು ಕಡೆಯಿಂದ ಆಕಾಶ ದೀಪಗಳು ನದಿಯಿಂದ ಗಗನವನ್ನು ಚುಂಬಿಸಿ ನೆರೆದವರ ಮನಸೆಳೆಯಿತು. ಪ್ರಸಿದ್ಧ ಕುರುವಳ್ಳಿಯ ಕಮಾನು ಸೇತುವೆಯನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಸಿಡಿಮದ್ದು ಪ್ರದರ್ಶನವನ್ನು ನೋಡಲು ಆಗಮಿಸಿದ ಜನರಿಗೆ ತುಂಗಾ ನದಿ ದಡದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು.




ವಾಹನ ದಟ್ಟಣೆನಿಯಂತ್ರಿಸಲು ಪಟ್ಟಣದ ವಿವಿಧ ಭಾಗಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಅಹಿತಕರ ಘಟನೆ ಸಂಭವಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಪ್ಪೋತ್ಸವ ಸಮಿತಿ, ಪೊಲೀಸ್ ಇಲಾಖೆ ಕೈಗೊಂಡಿತ್ತು. ಕಾಮನು ಸೇತುವೆ ಮತ್ತು ತೆಪ್ಪಕ್ಕೆ ತುಂಗಾ ಕಂಪ್ಯೂಟ್ರಾನಿಕ್ಸ್ ಮಾಲೀಕರಾದ ಅನಿಲ್ ಕುಮಾರ್ ನೇತೃತ್ವದಲ್ಲಿ ಕೋಲ್ಡ್ ಫೈರ್ ಅಳವಡಿಕೆ ಮಾಡಲಾಗಿತ್ತು. ಇದು ತೆಪ್ಪೋತ್ಸವ ನೋಡಲು ಆಗಮಿಸಿದ್ದ ಜನರ ಕಣ್ಮನ ಸೆಳೆಯಿತು.

ಈ ಸಂದರ್ಭದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ ವೈ ರಾಘವೇಂದ್ರ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಶೀಲ ಶೆಟ್ಟಿ, ತೆಪ್ಪೋತ್ಸವ ಸಮಿತಿ ಸಂಚಾಲಕರಾದ ಸೊಪ್ಪುಗುಡ್ಡೆ ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

47 minutes ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

51 minutes ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 hour ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

6 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

8 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago