ನಾಳೆ(21-12-2022) ರಿಪ್ಪನ್‌ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi

ರಿಪ್ಪನ್‌ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ.

ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ವಿರಾಟಪುರ ವಿರಾಗಿ ಸಿದ್ಧವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್. ಲಿಂಗದೇವರು ನಿರ್ದೇಶನದ ಈ ಸಿನಿಮಾವನ್ನು ಸಮಾಧಾನ್ ಸಂಸ್ಥೆ ನಿರ್ಮಿಸಿದೆ. ಈ ಹಿನ್ನೆಲೆಯಲ್ಲಿ ಮಹಾಪುರುಷ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ನೆನಪಿನಲ್ಲಿ ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ ನಡೆಸಲು ಉದ್ದೇಶಿಸಲಾಗಿದೆ.6 ರಥ, 13 ದಿನ, 7000 ಕಿಮೀ, 360 ಸಭೆ, 1 ಕೋಟಿ ಜನರ ಉಪಸ್ಥಿತಿ ಇರುವ ಈ ಬೃಹತ್ ರಥಯಾತ್ರೆ ಡಿಸೆಂಬರ್ 20ರಂದು ಆರಂಭವಾಗಲಿದ್ದು, ಜನವರಿ 1ರಂದು ಗದಗದಲ್ಲಿ ಮುಕ್ತಾಯಗೊಳ್ಳಲಿದೆ.

ಸಾರ್ವಜನಿಕರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ರಥಯಾತ್ರೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೋರಿದರು.



ಹಾನಗಲ್ ಶ್ರೀ ಗುರುಕುಮಾರ ಶಿವಯೋಗಿಗಳ ಕುರಿತು

ವೀರಶೈವಕ್ಕೊಂದು ಇತಿಹಾಸವಿದೆ; ಅಧ್ಯಯನವಿಲ್ಲ. ಅದರದೇ ಆದ ಸಂಹಿತೆ ಇದೆ; ವ್ಯವಸ್ಥೆ ಇಲ್ಲ. ಸಂಸ್ಕೃತಿ ಇದೆ; ಸಂವಹನ ಸಾಧ್ಯತೆಯ ಸೌಲಭ್ಯಗಳು ಸಾಕಷ್ಟಿಲ್ಲ. ದರ್ಶನವಿದೆ; ಮಾರ್ಗದರ್ಶನವಿಲ್ಲ. ಪರಂಪರೆ ಇದೆ; ಪರಿಣಾಮವಿಲ್ಲ. ಅನುಭಾವವಿದೆ; ಅನುಷ್ಠಾನವಿಲ್ಲ. ಸಿದ್ಧಾಂತವಿದೆ; ಸಾಧನೆ – ಸಿದ್ಧಿಗಳಿಲ್ಲ. ಸಮಾಜ ಇದೆ; ಸಂಘಟನೆ ಇಲ್ಲ!
ಸ್ವಾತಂತ್ರ್ಯಪೂರ್ವದ ಈ ವಿಪರ್ಯಾಸ ದಿನಗಳನ್ನು ನೆನೆದರೆ ಕಣ್ಣೀರು ಬರದಿರದು. ಇಂತಹ ಸಂಕೀರ್ಣ ಸನ್ನಿವೇಶದಲ್ಲಿ ಈ ಎಲ್ಲಾ ಅಸಾಧ್ಯಗಳನ್ನು ಸಾಧ್ಯವಾಗಿಸಲು ಸಮಾಜಕ್ಕೆ ಸಂಜೀವಿನಿಯಾಗಿ ಬಂದವರು ಶ್ರೀ ಹಾನಗಲ್ ಕುಮಾರೇಶ್ವರರು.

ಹಾನಗಲ್ ಗುರುಕುಮಾರ ಶಿವಯೋಗಿಗಳು, ಮಠದಿಂದ ಘಟ ಬೆಳಗಬಾರದು – ಘಟದಿಂದ ಮಠ ಬೆಳಗಬೇಕೆಂದು ಸಾಧಿಸಿ ತೋರಿಸಿದವರು. 19ನೇ ಶತಮಾನದ ಆದಿಯಲ್ಲಿಯೇ ಅವರು ಹೊಸ ಮನ್ವಂತರಕ್ಕೆ ಭದ್ರ ಬುನಾದಿ ಹಾಕಿದವರು.

ಸಮ ಸಮಾಜ ನಿರ್ಮಾಣದ ರೂವಾರಿಗಳು. ಸರ್ವರಿಗೂ ಶಿಕ್ಷಣ. ಅಂಧರ ಬಾಳಿಗೆ ಸಂಗೀತ ಶಿಕ್ಷಣ. ಅಖಿಲ ಭಾರತ ವೀರಶೈವ (ಲಿಂಗಾಯತ) ಮಹಾಸಭಾ ಸ್ಥಾಪನೆ. ಮಹಿಳಾ ಶಿಕ್ಷಣ ಮತ್ತು ಸ್ತ್ರೀ ಸಬಲೀಕರಣ. ಶಿವಯೋಗ ಮಂದಿರ ಸ್ಥಾಪನೆ. ವಚನ ತಾಡೋಲೆಗಳ ಸಂಗ್ರಹ ಮತ್ತುಗ್ರಂಥಾಲಯ ಸ್ಥಾಪನೆ. ಅಧುನಿಕ ಕೃಷಿ ಪದ್ಧತಿ ಮತ್ತು ಗೋಶಾಲೆ ಸ್ಥಾಪನೆ. ವಿಭೂತಿ ಹಾಗೂ ಇಷ್ಟ ಲಿಂಗದ ನಿರ್ಮಾಣ, ಹತ್ತಿ ಕರ್ಖಾನೆಯ ಸ್ಥಾಪನೆ. ಆಯುರ್ವೇದ ಚಿಕಿತ್ಸಾಲಯ ಸ್ಥಾಪನೆ. ಚಿತ್ರಮಂದಿರಗಳ ಪ್ರಾರಂಭ, ಪ್ರಾಣಿ ಬಲಿ ನಿಷೇಧ.

ಹೀಗೆ ಹತ್ತು ಹಲವಾರು ಸಾಧ್ಯತೆಗಳನ್ನು ಸಾಧ್ಯವಾಗಿಸಿದವರು ಮತ್ತು ಒಬ್ಬ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಇಷ್ಟೆಲ್ಲಾ ಮಾಡಬಹುದೆ ಎಂಬುದಕ್ಕೆ ಸಾಕ್ಷಿ ಪೂಜ್ಯ ಹಾನಗಲ್ಲ ಶ್ರೀ ಗುರುಕುಮಾರ ಶಿವಯೋಗಿಗಳು.


ಸಮಾಜದ ಕಣ್ಣೀರನ್ನು ಒರೆಸಿ ಸದೃಢ ಸಮಾಜವನ್ನು ನಿರ್ಮಿಸಲು ತಮ್ಮ ಜೀವನವನ್ನೆ ಶ್ರೀಗಂಧದಂತೆ ತೇಯ್ದು ಸುಗಂಧ ಬೀರಿದವರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago