Headlines

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.




ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ.

ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು.




ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ ಚಂದ್ರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಎಲ್ಲರೊಂದಿಗೆ ಸ್ನೇಹದಿಂದ ಬೆರೆಯುತ್ತಿದ್ದುದರಿಂದ ದೊಡ್ಡ ಸಂಖ್ಯೆಯ ಸ್ನೇಹಿತರ ಬಳಗ ಅವರದಾಗಿತ್ತು.



Leave a Reply

Your email address will not be published. Required fields are marked *