ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ|wild

ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಕೋಯ್ಲು ಮಾಡಿ ಹಾಕಿದ್ದ ಭತ್ತ, ಹುಲ್ಲು ಹಾಗೂ ಕೊಳವೆ ಬಾವಿಗೆ ಅಳವಡಿಸಿದ್ದ ಪೈಪ್ ಲೈನ್ ದ್ವಂಸಗೊಳಿಸಿದೆ.
ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ ಹಾನಿಯಾಗಿದೆ. ಸಣ್ಣ ಸಣ್ಣ ಅಡಿಕೆ ಗಿಡಗಳನ್ನು ಮುರಿದು ಹಾಕುವುದಲ್ಲದೆ, ಸಣ್ಣ ಮರಗಳಿಗೆ ಮೈ ಉಜ್ಜಿಕೊಳ್ಳುವುದರಿಂದ ಮರಗಳು ಮುರಿದು ನಷ್ಟವಾಗುತ್ತಿದೆ.
ಹೊರಬೈಲಿನ ಎಲೆಬಳ್ಳಿ ಮಂಜಪ್ಪ ಹಾಗೂ ಇವರ ಸೋದರರ ಶುಂಠಿ ಹಾಗೂ ಗದ್ದೆಗೆ ಹಾನಿ ಮಾಡಿದೆ. ಗಾಮನಗದ್ದೆಯ ಹರಿಗೆಕೊಪ್ಪದ ನಾರಾಯಣಪ್ಪನರ ಕೋಯ್ದು ಹಾಕಿದ್ದ ಭತ್ತದ ಗದ್ದೆಗೆ ನುಗ್ಗಿ ಹಾಳು ಮಾಡಿದೆ. ಇವರದ್ದೇ ಪೈಪ್‌ಲೈನ್‌ನ ವಾಲ್‌ಗಳನ್ನು ಮುರಿದು ಹಾಕಿದೆ.
ಪ್ರತಿನಿತ್ಯವೂ ಜಮೀನಿಗೆ ನುಗ್ಗಿ ದಾಂಧಲೆ ಮಾಡುತ್ತಿದ್ದು, ಸಂಜೆಯಾಗುತ್ತಿದ್ದಂತೆ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವಂತಾಗಿದೆ. ಡೈರಿಗೆ ಹಾಲು ಹಾಕುವವರು, ದಿನನಿತ್ಯದ ಕೆಲಸ ಕಾರ್ಯಗಳಿಗೆ ಪಟ್ಟಣಗಳಿಗೆ ಹೋಗಿ ಬರುವವರು, ಶಾಲಾ ಮಕ್ಕಳು ಆತಂಕದಲ್ಲಿಯೇ ಸಂಚರಿಸುವಂತಾಗಿದೆ. ಗದ್ದೆ ಹೊಲಗಳಲ್ಲಿ ಕೆಲಸ ಮಾಡಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ.
ಸಿರಿಗೆರೆ ವಲಯಾರಣ್ಯಾಕಾರಿ ಕಚೇರಿ ಸಿಬ್ಬಂದಿಗಳ ಗಮನಕ್ಕೆ ತಂದಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.ನಿರಂತರವಾಗಿ ಹಾನಿ ಮಾಡುತ್ತಿರುವ  ಆನೆ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ  ಯಾವುದೇ ಕ್ರಮ ಕೈಗೊಳ್ಳದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗುತ್ತಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

5 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

5 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

6 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

11 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

12 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago