ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident

ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ :

ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ…..

ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ.




ಅಂಕಿ ಅಂಶಗಳ ಅಂದಾಜಿನ ಪ್ರಕಾರ ಇತ್ತೀಚಿನ ದಿನಗಳಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿರುವವರು ಬಹುಪಾಲು ಸಂಖ್ಯೆಯಲ್ಲಿ ಯುವಕರೇ ಆಗಿದ್ದಾರೆ. ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿರುವವರಲ್ಲಿ ಹೆಚ್ಟಿನವರು 18 ರಿಂದ 30 ವರ್ಷದೊಳಗಿನವರಾಗಿದ್ದಾರೆ. ಕೆಲವು ಪೋಷಕರು ಅಪ್ರಾಪ್ತ ವಯಸ್ಸಿನ ಮಕ್ಕಳ ಒತ್ತಾಯಕ್ಕೆ ಕಟ್ಟುಬಿದ್ದು ವಾಹನಗಳನ್ನು ಚಲಾಯಿಸಲು ಕೊಟ್ಟು ತಪ್ಪುಮಾಡುತ್ತಿದ್ದಾರೆ. ಇವರು ತಾವು ಬಲಿಯಾಗುವುದಲ್ಲದೆ ಬೇರೆಯವರನ್ನೂ ಬಲಿತೆಗೆದುಕೊಳ್ಳುತ್ತಿದ್ದಾರೆ.


ಹೆಚ್ಚಿನ ರಸ್ತೆ ಅಪಘಾತಗಳಲ್ಲಿ ತಮ್ಮ ತಪ್ಪಿಲ್ಲದಿದ್ದರೂ ಬೇರೆ ಯಾರೋ ಮಾಡಿದ ತಪ್ಪಿಗೆ ಅಮಾಯಕ ಮುಗ್ಧ ಜೀವಗಳು ಬಲಿಯಾಗುತ್ತಿವೆ. ನಶೆಯಲ್ಲಿ ತೇಲಾಡುವವರಿಗೆ ತಾನು ರಸ್ತೆಯ ಮೇಲೆ ಸಂಚರಿಸುತ್ತಿಲ್ಲ ಆಕಾಶದಲ್ಲಿ ತೇಲಾಡುತ್ತಿದ್ದೆನೆಂಬ ಭ್ರಮೆ ಇರುವುದರಿಂದಲೇ ಸಾಕಷ್ಟು ಅಪಘಾತಗಳು ಸಂಭವಿಸುತ್ತವೆ.ವಾಹನ ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪರಿಪಾಲಿಸದಿದ್ದಲ್ಲಿ ಏನೆಲ್ಲಾ ಅನಾಹುತಗಳು ಜರುಗಬಹುದು ಎಂಬುದನ್ನು ನಾವೆಲ್ಲಾ ಪ್ರತಿನಿತ್ಯ ಮಾಧ್ಯಮಗಳಲ್ಲಿ ವೀಕ್ಷಿಸುತ್ತಿದ್ದೇವೆ. ಆದರೆ ಪಾಲಿಸುತ್ತೇವೆಯೇ? ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂಬ ಹೇಳಿಕೆಗಳು ಲಂಚದ ಮುಂದೆ ಬಲಕಳೆದುಕೊಳ್ಳುತ್ತದೆ.

ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ ನಿಮ್ಮನ್ನು ಸಾಕಿ ಸಲುಹಿದ ಪೋಷಕರು ಕಣ್ಣಿರು ಹಾಕುವುದನ್ನು ತಪ್ಪಿಸುವುದಕ್ಕಾದರು ನಿಧಾನವಾಗಿ ಚಲಾಯಿಸಿ. ಜೀವಕ್ಕಿಂತ ಯಾವುದೂ ಮುಖ್ಯವಲ್ಲವೆಂಬುದು ನಿಮಗೆ ಅರಿವಿರಲಿ.

ಪ್ರತಿ ಹೊಸ ವರ್ಷದ ಸಮಯದಲ್ಲಿ ಅನಾಹುತಗಳು ನಡೆಯುವುದನ್ನು ಹಲವಾರು ವರ್ಷಗಳಿಂದ ನೋಡುತಿದ್ದೇವೆ. ದಯವಿಟ್ಟು ನಿಧಾನವಾಗಿ ಸುರಕ್ಷಿತವಾಗಿ ವಾಹನ ಚಲಾಯಿಸಿ ಏಕೆಂದರೆ ಸಮಾಜಕ್ಕೆ ನಿಮ್ಮ ಸಾವು ಒಂದು ಸುದ್ದಿ ಅಷ್ಟೇ.. ಆದರೆ ನಿಮ್ಮ ಕುಟುಂಬಕ್ಕೆ ಅದರಲ್ಲೂ ನಿಮ್ಮ ಹೆತ್ತು ಹೊತ್ತವರಿಗೆ ಅದೊಂದು ಆಘಾತ…..

ದಯವಿಟ್ಟು ಆಲೋಚಿಸಿ ವಾಹನ ಚಲಾಯಿಸುವಂತೆ ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ……




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

5 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

5 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

5 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

10 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

12 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago