ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರಿಷಬ್ ಪಂತ್ ಕಾರು ಅಪಘಾತಕ್ಕೀಡಾಗಿದ್ದು ಕಾರು ಸಂಪೂರ್ಣ ಭಸ್ಮವಾಗಿದ್ದು ಪಂತ್ ಸ್ಥಿತಿ ಗಂಭೀರವಾಗಿದೆ.
ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ.
ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ರಿಷಭ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.
ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪನ್ ಕಿಶೋರ್ ಸಿಂಗ್ ತೆರಳಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್