ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.
ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.
ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.
ಘಟನೆ ಸಂಬಂಧ ಸಾಗರ ಟೌನ್ ಪೊಲೀಸರು ಸ್ತಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ಧಾರೆ.