ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರ ಸಾವು : ಕುಟುಂಬಸ್ಥರಿಂದ ಪ್ರತಿಭಟನೆ|Mescom

ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರನೊಬ್ಬ ಮೃತ ಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ನಡೆದಿದೆ.




ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶಗೊಂಡ ಆತನ ಕುಟುಂಬಸ್ಥರು ಮತ್ತು ಎಣ್ಣೆಕೊಪ್ಪ ಗ್ರಾಮಸ್ಥರು ಮೆಸ್ಕಾಂ ಇಲಾಖೆಯ ಉಪ ವಿಭಾಗ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ತಾಲೂಕಿನ ಆನವಟ್ಟಿಯಲ್ಲಿ ಸೋಮವಾರ ನಡೆಯಿತು.

ಘಟನೆ ಹಿನ್ನೆಲೆ:

ಎಣ್ಣೆಕೊಪ್ಪ ಗ್ರಾಮದ ರವಿ ದುರ್ಗಪ್ಪ ಎಂಬ 24 ವರ್ಷದ ಯುವಕ ವಿದ್ಯುತ್ ಗುತ್ತಿಗೆದಾರರ ಬಳಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದನು. ಕುಬಟೂರು ಗ್ರಾಮದಲ್ಲಿ ಡಿ.17 ರಂದು ವಿದ್ಯುತ್ ಪರಿವರ್ತಕ ಅಳವಡಿಕೆ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ ಪರಿಣಾಮ ವಿದ್ಯುತ್ ತಗುಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದನು. ಆನವಟ್ಟಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸೋಮವಾರ ಮೃತಪಟ್ಟಿದ್ದಾನೆ.

ಕುಟುಂಬಸ್ಥರಿಗೆ ಆಧಾರವಾಗಿದ್ದ ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರೇ ನೇರ ಹೊಣೆ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿಸಿದರು.




ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ. ಮಹಾಲಿಂಗಪ್ಪ ಮಾತನಾಡಿ, ಮೆಸ್ಕಾಂ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ತನದಿಂದ ಯುವಕನೊಬ್ಬ ಮೃತಪಟ್ಟಿದ್ದಾನೆ. ಘಟನೆಯಿಂದ ಕುಟುಂಬಕ್ಕೆ ಮೂಲಧಾರವೇ ಇಲ್ಲದಂತಾಗಿದೆ. ಕೂಡಲೇ ನಿರ್ಲಕ್ಷ್ಯ ತೋರಿದ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಂಡು, ಮೃತ ದಿನಗೂಲಿ ನೌಕರನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ತಾಪಂ ಮಾಜಿ ಅಧ್ಯಕ್ಷ ರುದ್ರಪ್ಪ ಕಡ್ಲೇರ್ ಮಾತನಾಡಿ, ಮೆಸ್ಕಾಂ ಇಲಾಖೆಯ ಆನವಟ್ಟಿ ಉಪ ವಿಭಾಗದಲ್ಲಿ ಅನೇಕ ವಿದ್ಯುತ್ ಅವಘಡಗಳು ಸಂಭವಿಸುತ್ತಿವೆ. ಆದರೂ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಇದೀಗ ಬಾಳಿ ಬದುಕಬೇಕಾದ ಯುವಕನೊಬ್ಬನ ಸಾವಿಗೆ ಅಧಿಕಾರಿಗಳು ಕಾರಣರಾಗಿದ್ದಾರೆ. ಇಲಾಖಾ ಮೇಲಧಿಕಾರಿಗಳು ಮೃತ ಯುವಕನ ಕುಟುಂಬಸ್ಥರಿಗೆ ನ್ಯಾಯಕೊಡಿಸುವಲ್ಲಿ ವಿಫಲರಾಗಿದ್ದಾರೆ. ಇದನ್ನು ವಿರೋಧಿಸಿ ಮಂಗಳವಾರ ಯುವಕನ ಶವವನ್ನು ಇಲಾಖೆಯ ಕಚೇರಿಯ ಮುಂಭಾಗದಲ್ಲಿಟ್ಟು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೇಂದ್ರ ಸಮಿತಿ ಸದಸ್ಯ ಮಹಾಲಿಂಗೇಗೌಡ, ಜಿಲ್ಲಾ ನಿರ್ದೇಶಕ ಸಮೀರ್ ಬಾಷಾ, ಎಸ್.ಕೆ. ಲೋಕೇಶ್, ಮಹೇಶ್ ಕವಲಿ, ಎಚ್.ಎಂ. ಮುತ್ತೇಶ, ಹನುಮಂತಪ್ಪ, ರಾಘವೇಂದ್ರ ಆಚಾರ್, ದಿವಾಕರಯ್ಯ, ಶಿವಯೋಗಿಸ್ವಾಮಿ, ಕುಟುಂಬಸ್ಥರಾದ ಅಶ್ವಿನಿ, ಜಯಮ್ಮ, ಸಾವಿತ್ರಮ್ಮ, ಖಂಡ್ಯಪ್ಪ, ಗ್ರಾಮಸ್ಥರಾದ ಹೊನ್ನಪ್ಪ, ಮಂಜಪ್ಪ ಉದ್ರಿ, ಧರ್ಮಾನಾಯ್ಕ್, ಮೈಲಾರಿ ನಾಯ್ಕ್, ಎನ್.ರವಿ, ಬಸವಣ್ಯಪ್ಪ ಉಪ್ಪಾರ್, ಅಶೋಕ್, ಆನಂದ, ಸುರೇಶ, ಪರಸಪ್ಪ, ಸೇರಿದಂತೆ ಮತ್ತಿತರರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

13 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

13 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

13 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

20 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago