ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದ ಯೋಗ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳು ತೃತೀಯ ಚಾಂಪಿಯನ್ ಪಟ್ಟ ಪಡೆದು ಕೊಂಡಿದ್ದಾರೆ .
ಕಾಲೇಜಿನ ವಿದ್ಯಾರ್ಥಿಗಳಾದ ಕಾರ್ತಿಕ್. ಎನ್. ಜಿ, ಉಜ್ವಲ್. ಎಂ, ಮುಸ್ತಾಫ ಎಂ, ನಂದನ್ ಕುಮಾರ್, ಅಭಿಷೇಕ್, ಮೇಘ. ಎನ್ ಕೆ, ಸನು ಜೆ, ಶೈಲಜಾ. ಜೆ. ಎಂ, ಸಂಧ್ಯಾ. ಹೆಚ್. ಎ, ಜಯಶ್ರೀ. ಹೆಚ್. ಎಸ್, ರವರಿದ್ದ ತಂಡ ಈ ಸಾಧನೆ ಮಾಡಿದೆ.
ಈ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷ ಹಾಗೂ ಶಾಸಕರಾದ ಹರತಾಳು ಹಾಲಪ್ಪ, ಪ್ರಾಂಶುಪಾಲರಾದ ಚಂದ್ರಶೇಖರ್ ಟಿ, ದೈಹಿಕ ಶಿಕ್ಷಣ ನಿರ್ದೇಶಕ ಕುಮಾರಸ್ವಾಮಿ. ಕೆ.ಸಿ. ಕಾಲೇಜಿನ ಬೋಧಕ/ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್