Headlines

ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ನೇತ್ರತ್ವದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ : ಜೆಡಿಎಸ್ ಮುಖಂಡರ ಅಭಿಮತ|Jds

ಹೊಸನಗರ : ಮಾಜಿ‌ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಾಜ್ಯ ಜೆಡಿಎಸ್ ಪಕ್ಷದ ಚುಕ್ಕಾಣಿ ಹಿಡಿದಿರುವ ಸಿಎಂ ಇಬ್ರಾಹಿಂ ರವರ ನೇತೃತ್ವದಲ್ಲಿ ಈ ಬಾರಿ ರಾಜ್ಯದ ಆಡಳಿತ ಚುಕ್ಕಾಣಿ ಜೆಡಿಎಸ್ ಪಕ್ಷಕ್ಕೆ ದೊರಕಲಿದೆ ಎಂದು ಜಿಲ್ಲಾ ಜೆಡಿಎಸ್ ಮುಖಂಡ ರಾಮಕೃಷ್ಣ ಹೇಳಿದರು.





ಅವರು ಇಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ತಾಲೂಕು ಜೆಡಿಎಸ್  ಪ್ರಮುಖರ ಸಭೆಯಲ್ಲಿ ಮಾತನಾಡಿ ಜಿಲ್ಲೆಯವರೇ ಆದಂತಹ ರಾಜ್ಯದ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ರವರು ಜನವರಿ 7ರಂದು ಜಿಲ್ಲೆಗೆ ಆಗಮಿಸಲಿದ್ದು ಪಕ್ಷದ ಪುನರ್ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳ ನೇಮಕವನ್ನು ಬೂತ್ ಮಟ್ಟದಲ್ಲಿ ರಚಿಸಲಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷ ಸೇರಲು ಜಿಲ್ಲೆಯ ಯುವ ಸಮೂಹ ಈಗಾಗಲೇ ತಂಡಗಳನ್ನು ರಚಿಸಿಕೊಂಡಿದ್ದು ರಾಜ್ಯಾಧ್ಯಕ್ಷರ ಭೇಟಿ ನಂತರ ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠಗೊಳ್ಳಲಿದೆ ಎಂದರು.

ರಾಜ್ಯ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಮಾತನಾಡಿ  ನಮ್ಮ ಕಾರ್ಯಕರ್ತರುಗಳು ಕುಮಾರಸ್ವಾಮಿಯವರು ಮಾಡಿರುವ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರನ್ನು ಸಂಪರ್ಕಿಸಿ 1ಬಾರಿ ಜೆಡಿಎಸ್ ಗೆ ಬೆಂಬಲಿಸುವಂತೆ ಮನವಿ ಮಾಡಬೇಕು,ಈ ಬಾರಿ ಜೆಡಿಎಸ್ ಕಾರ್ಯಕರ್ತರು ಅತಿ ಶ್ರಮವಹಿಸಿ ಕುಮಾರಸ್ವಾಮಿಯವರು 2023 ರಲ್ಲಿ  ಈ ರಾಜ್ಯದ ಮುಖ್ಯಮಂತ್ರಿಯಾಗುವ ಸನ್ನಿವೇಶಕ್ಕೆ ಸಾಕ್ಷಿಯಾಗಬೇಕು,




ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿದ್ದು ಈಗಲೂ ಕೂಡ ಪಕ್ಷದ ಪರ ಒಲವು ಹೊಂದಿದ್ದಾರೆ,ಮುಖಂಡರು ಹಾಗೂ ಕಾರ್ಯಕರ್ತರ ನಡುವಿನ ಸಂವಹನ ಕೊರತೆಯಿಂದ ಪಕ್ಷದ ಸಂಘಟನೆಯಲ್ಲಿ ಹಿನ್ನಡೆಯಾಗಿತ್ತು ಈಗ ತೀರ್ಥಹಳ್ಳಿ ಕ್ಷೇತ್ರದ ಯುವ ನಾಯಕ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಘೋಷಿತ ಅಭ್ಯರ್ಥಿ ಯಡೂರು ರಾಜಾರಾಮ್ ಅವರ ಸಂಘಟನಾ ಚತುರತೆಯಿಂದ ಚದುರಿಹೋಗಿದ್ದ ಪಕ್ಷದ ಹಳೆಯ ಕಾರ್ಯಕರ್ತರನ್ನು ಮತ್ತೆ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷಕ್ಕೆ ಹಿಂತಿರುಗುತ್ತಿದ್ದು ಮುಂದಿನ ದಿನಗಳಲ್ಲಿ ತೀರ್ಥಹಳ್ಳಿಯಲ್ಲಿ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.


ತಾಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಅಧ್ಯಕ್ಷತೆ ವಹಿಸಿದ್ದರು.

ಈ ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ನರಸಿಂಹ ಗಂಧದ ಮನೆ, ಜಿಲ್ಲಾ ಎಸ್ಸಿ ಎಸ್ಟಿ ಮಹಿಳಾ ಘಟಕದ ಅಧ್ಯಕ್ಷ ಉಷಾ ನಾಯಕ್, ಗೀತಾ ಸತೀಶ್, ದಿವ್ಯ ಪ್ರವೀಣ್, ಸುಮತಿ ಪೂಜಾರಿ, ಲಕ್ಷ್ಮಿ ರೇಖಾ, ಹೆಚ್ ಪಾಲಾಕ್ಷ, ನಾಗರಾಜ ಕಂಕಾರಿ, ಭಾಸ್ಕರ, ಪ್ರಸನ್ನ ಶಾಮ್,  , ನವಲೆ ಮಂಜುನಾಥ್ , ಬಸವರಾಜ್ , ದಿವಾಕರ , ರಮಾನಂದ, ಫಾರೂಕ್, ಚಂದ್ರಪ್ಪ, ಜಯರಾಮ ಶೆಟ್ಟಿ, ಈರಣ್ಣ, ನಾಗೇಶ್, ಹೆಚ್ ಆರ್ ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *