ರಾಷ್ಟ್ರ ಮಟ್ಟದಲ್ಲಿ‌ ಮಲೆನಾಡಿನ ಮರ್ಯಾದೆ ಕಳೆದ ಸಾಗರ ತಾಲೂಕಿನ ಸರ್ಕಾರಿ ಶಾಲೆಯ ಸೀರೆ ಶೌಚಾಲಯ|viral video

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರುವೆ ಗ್ರಾಮದ ಸಮೀಪ ಇರುವ ಏಳಿಗೆ ಗ್ರಾಮದಲ್ಲಿನ ಶಾಲೆಯೊಂದರ ಸೀರೆ ಶೌಚಾಲಯದ ವಿಡಿಯೋವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.




ಇಂತಹದ್ದೊಂದು ಅವ್ಯವಸ್ಥೆಯು ಇನ್ನೂ ಇದೇ ಎಂದು ರಾಷ್ಟ್ರೀಯವಾಹಿನಿಗಳು ಸೀರೆ ಶೌಚಾಲಯದ ಸರ್ಕಾರಿ ಶಾಲೆಯ ಸ್ಥಿತಿಯನ್ನು ಬಿಚ್ಚಿಡುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದು, ಮಾಜಿ ಸಿಎಂ ಬಿಎಸ್​ ವೈ ತವರು, ಘಟಾನುಘಟಿ ರಾಜಕಾರಣಗಳ ಶಕ್ತಿಕೇಂದ್ರ  ಹಾಗೂ ವಿಮಾನ ನಿಲ್ಧಾಣವನ್ನು ಹೊಂದಿ ಅಭಿವೃದ್ಧಿ ಕಾಣುತ್ತಿರುವ ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿಕೊಡುವಂತಹ ಸ್ಥಿತಿಯು ಇಲ್ಲವೇ ಎಂಬ ಟೀಕೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.


ಅಸಲಿಗೆ ಸಾಗರ ಹಾಗೂ ಹೊಸನಗರ ತಾಲೂಕಿನ ಗಡಿಭಾಗದಲ್ಲಿ ಬರುವ ಈ ಶಾಲೆಯನ್ನು ಅಧಿಕಾರಿಗಳು ನೋಡಿದ್ದೆ ಇಲ್ಲ ಎನ್ನಬಹುದು. ಎಲ್ಲಿ ಬರುತ್ತೆ ಎಂದು ಅಧಿಕಾರಿಗಳು ಕೇಳುವ ಸ್ಥಿತಿಯಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಊರುಗಳಲ್ಲಿ ಜನರೇ ಹಾಗೂ ಹೀಗೂ ಒಂದಿಷ್ಟು ಹರಸಾಹಸ ಮಾಡಿ ಸೌಲಭ್ಯಗಳನ್ನು ಊರಿಗೆ ಒದಗಿಸಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಇಲ್ಲಿಯು ಸಹ  ಏಳಿಗೆ, ಕಿರತೋಡಿ ಮತ್ತೀತರ ಗ್ರಾಮದ 13 ಮಕ್ಕಳು ಈ ಶಾಲೆಯಲ್ಲಿ ಓದುತ್ತಿದ್ದಾರೆ.




ಆದರೆ ಶಿಕ್ಷಣ ಇಲಾಖೆ ಈ ಶಾಲೆಗೆ ಏನು ಬೇಕು ಎಂದು ಸಹ ಇದುವರೆಗೂ ನೋಡಿದಂತಿಲ್ಲ. ಖಾಯಂ ಶಿಕ್ಷಕರನ್ನು ಸಹ ನೇಮಕ ಮಾಡದ ಇಲಾಖೆಯ ನಿರ್ಲಕ್ಷ್ಯ ಒಂದುಕಡೆಯಾದರೆ, ಶೌಚಾಲಯದ ದುರ್ವವ್ಯಸ್ಥೆ ಹೇಗೋ ಅಡ್ಜೆಸ್ಟ್ ಮಾಡಿಕೊಳ್ತಾರೆ ಎಂಬಂತಹ ಧೋರಣೆ ಶಾಲೆಯನ್ನು ದುಸ್ತಿತಿಗೆ ದೂಡಿದೆ.  ಹೆಣ್ಣುಮಕ್ಕಳು ಬಯಲು ಶೌಚಕ್ಕೆ ಹೋಗಬೇಕಾದ ಸ್ಥಿತಿ ಇಲ್ಲಿದೆ. ಅದಕ್ಕಾಗಿ ಇಲ್ಲಿನವರೆ ಸೀರೆಯೊಂದನ್ನ ಅಡ್ಡಗಟ್ಟಿ ಮರೆ ಮಾಡಿ, ಹೆಣ್ಣುಮಕ್ಕಳಿಗೆ ಶೌಚಕ್ಕೆ ಹೋಗಲು ವ್ಯವಸ್ಥೆ ಮಾಡಿದ್ಧಾರೆ.




ಇದೀಗ ಸೀರೆ ಕಟ್ಟಿದ ಫೋಟೋ ವಿಡಿಯೋ ವೈರಲ್​ ಆಗುತ್ತಿದ್ದು, ವ್ಯಾಪಕ ಟೀಕೆ ಕೇಳಿಬರುತ್ತಿದೆ. ಸ್ವಚ್ಚಭಾರತ್ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ಧಾರೆ. ಆದರೆ ಅದು ತಳಮಟ್ಟದ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಕಾಣುತ್ತಿಲ್ಲವೆ ಅಥವಾ ಪದೇಪದೇ ಕಾಗದ ಹಿಡಿದು ಬಂದು ಮನವಿ ಸಲ್ಲಿಸಿದರಷ್ಟೆ ಬೆಲೆಯೇ ಎಂದು ಪ್ರಶ್ನಿಸುತ್ತಿದ್ದಾರೆ.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

8 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

8 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

8 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

14 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

15 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago