ರಿಪ್ಪನ್‌ಪೇಟೆ : ಶನಿವಾರ ತಡರಾತ್ರಿ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಸಂಪರ್ಕ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿ ಪಡೆದಿತ್ತು.
ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ ಎಂಬುವವರ ಜೀವನಕ್ಕೆ ಆಸರೆಯಾಗಿದ್ದ ಹಸುವನ್ನು ಚಿರತೆ ಬಲಿ ಪಡೆದುಕೊಂಡ ಘಟನೆ ನಡೆದಿತ್ತು.
ಮಳವಳ್ಳಿ ಗ್ರಾಮದಿಂದ ಶಾಲಾ ಕಾಲೇಜ್‌ಗೆ ಮತ್ತು ದಿನನಿತ್ಯದ ವ್ಯವಹಾರಕ್ಕಾಗಿ ಜನರು ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಘಟನೆಯಿಂದಾಗಿ ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.ಓಡಾಡಲು ಭಯಪಡುವ ವಾತವರಣ ಸೃಷ್ಟಿಯಾಗಿದೆ.
ಈ ಹಿನ್ನಲೆಯಲ್ಲಿ ಘಟನೆಯ ಕುರಿತು ತಕ್ಷಣ ಮಾಹಿತಿ ಪಡೆದುಕೊಂಡ ಸಾಗರ – ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಕ್ಷಣ ಸಂಬಂಧಪಟ್ಟ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಚಿರತೆ ದಾಳಿಯಿಂದ ಹಸುವನ್ನು ಕಳೆದುಕೊಂಡ ಬಡ ರೈತನಿಗೆ ಪರಿಹಾರ ನೀಡುವಂತೆ ಹಾಗೇಯೆ ಜನಸಾಮಾನ್ಯರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.