ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಸಮೀಪದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಪರವಾನಗಿ ನೀಡದಂತೆ ಮನವಿ|Ripponpet

ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.




ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ ವ್ಯಾಸಂಗ ಮಾಡುವ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ.

ಆದ್ದರಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುವುದರ ಜೊತೆಗೆ ಧಾರ್ಮಿಕ ಸ್ಥಳದ ಗೌರವ ಕಾಪಾಡುವ ಸಲುವಾಗಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಬಾರದು ಎಂದು ಅಬಕಾರಿ ಜಿಲ್ಲಾಧಿಕಾರಿಳು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.




ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅರ್ ಎ ಚಾಬುಸಾಬ್ ,ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ,ಜನಪರ ಹೋರಾಟಗಾರ ಟಿ ಆರ್ ಕೃಷ್ಣಪ್ಪ ,ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಮಹಮ್ಮದ್ ರಫ಼ಿ ,ಕಾರ್ಯದರ್ಶಿ ಶಫ಼ಿವುಲ್ಲಾ ಮುಖಂಡರಾದ ಕೆಹೆಚ್ ಆರ್ ಮಹಮ್ಮದ್ , ಹಸನಬ್ಬ  ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

8 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

9 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

10 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago