ರಿಪ್ಪನ್‌ಪೇಟೆ: ಇಲ್ಲಿನ ವಿನಾಯಕ ನಗರದ ದುರ್ಗಾ ಪರಮೇಶ್ವರಿ ದೇವಸ್ಥಾನದ ರಸ್ತೆ ಮತ್ತು ಬಾಕ್ಸ್ ಚರಂಡಿ ಕಾಮಗಾರಿಗೆ 35 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿರುವ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು.
ಇಂದು ಕಾಮಗಾರಿ ನಡೆಯುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಕೆಲಸಗಾರರ ಬಳಿ ಎಷ್ಟು ಸಿಮೆಂಟ್ ಹಾಕುತ್ತಿದ್ದೀರಾ ? ಎಂದು ಕೇಳಿದಾಗ ತಡವರಿಸಿ ಕೆಲಸಗಾರ 10 ಚೀಲ ಎಂದು ಹೇಳಿದಾಗ ಕೋಪಗೊಂಡ ಶಾಸಕರು 14 ಚೀಲ ಹಾಕಬೇಕು. ಯಾರೋ ಗುತ್ತಿಗೆದಾರ. ಕಾಮಗಾರಿ ಕಳಪೆಯಾಗಿದೆ ಹೀಗೆ ಮಾಡದೇ ಇನ್ನೂಮ್ಮೆ ಕಿತ್ತು ಸರಿಪಡಿಸಿ ಗುಣಮಟ್ಟದ ರಸ್ತೆ ಮಾಡುವಂತೆ ಗುತ್ತಿಗೆದಾರನಿಗೆ ಖಡಕ್ ವಾರ್ನಿಂಗ್ ಮಾಡಿದರು.
ನಂತರ ಸಾಗರ ರಸ್ತೆಯ ಸಂತೆ ಮಾರ್ಕೆಟ್ ನಿಂದ ಬಸವೇಶ್ವರ ಶಾಲೆಯವರೆಗಿನ 35 ಲಕ್ಷ ರೂ. ವೆಚ್ಚದ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮಿ, ಸದಸ್ಯರಾದ ದೀಪಾ, ಪಿಡಿಓ ಜೆ.ಚಂದ್ರಶೇಖರ್, ಬಿಜೆಪಿ ಮುಖಂಡರಾದ ಆರ್.ಟಿ.ಗೋಪಾಲ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶ್‌ಸಿಂಗ್, ಪಿ.ರಮೇಶ್, ಮಲ್ಲಿಕಾರ್ಜುನ ಜಿ.ಡಿ., ಪತ್ರಕರ್ತ ರಿ.ರಾ. ರವಿಶಂಕರ, ಸುಂದರೇಶ್, ರಚನಾ ಗವಟೂರು, ಸುಧೀರ್ ಪಿ ಇನ್ನಿತರರು ಹಾಜರಿದ್ದರು.
ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿದ ಶಾಸಕ ಹರತಾಳು ಹಾಲಪ್ಪ
ರಿಪ್ಪನ್‌ಪೇಟೆ ತೀರ್ಥಹಳ್ಳಿ ರಸ್ತೆಯ ಗಾಂಧಿನಗರದ ಶ್ರೀ ವೀರಾಂಜನೇಯ ವಾಲಿಬಾಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ದ್ವಿತೀಯ ವರ್ಷದ ಗ್ರಾಮೀಣ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಕರು ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಉತ್ತಮ ಸಾಧನೆಗೈಯುವತ್ತಾ ತಮ್ಮ ಗಮನಹರಿಸಬೇಕಾಗಿದೆ.ಈ ಬಾರಿ ರಿಪ್ಪನ್‌ಪೇಟೆಯ ಪ್ರತಿಭೆಗಳು ವಾಲಿಬಾಲ್ ನಲ್ಲಿ ಜಿಲ್ಲಾ ,ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡು ಊರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಅದು ನಮಗೆಲ್ಲಾರಿಗೂ ಹೆಮ್ಮೆಯ ಸಂಗತಿ ಎಂದರು.
ಈ ಸಂಧರ್ಭದಲ್ಲಿ ಶಾಕರನ್ನು ಶ್ರೀ ವೀರಾಂಜನೇಯ ವಾಲಿಬಾಲ್ ಕ್ಲಬ್ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮಿ ಬಿಜೆಪಿ ಮುಖಂಡರಾದ ಆರ್.ಟಿ.ಗೋಪಾಲ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಎಂ.ಸುರೇಶ್‌ಸಿಂಗ್, ಪಿ.ರಮೇಶ್, ಮಲ್ಲಿಕಾರ್ಜುನ ಜಿ.ಡಿ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್