Headlines

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚ್ಯೂನರ್ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡುರೂ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚುನರ್ ಕಾರು ಪಲ್ಟಿಯಾದ ಘಟನೆ ನಡೆದಿದೆ.




ಸೂಡೂರು ಗೇಟ್ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಕುಂದಾಪುರ ಮೂಲದವರಾದ ಉದಯ್ ಕುಮಾರ್ ಕುಟುಂಬ ಬೆಂಗಳೂರಿನಲ್ಲಿ ವಾಸಿಸುತಿದ್ದು ಮದುವೆ ಕಾರ್ಯಕ್ರಮದ ನಿಮಿತ್ತ ಕುಂದಾಪುರಕ್ಕೆ ಬಂದು ವಾಪಾಸ್ ತೆರಳುವಾಗ ಈ ದುರ್ಘಟನೆ ನಡೆದಿದೆ.




ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಒಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



About The Author

Leave a Reply

Your email address will not be published. Required fields are marked *