ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನಕೊಪ್ಪ ಗ್ರಾಮದಲ್ಲಿ ಚಿರತೆ ಇದೆ ಹುಷಾರು ಎಂದು ಹೇಳಿದ್ದಕ್ಕೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊನ್ನಕೊಪ್ಪ ಗ್ರಾಮದ ದಿನೇಶ್ (42) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ರಾತ್ರಿ 10-00 ಗಂಟೆ ಸುಮಾರಿಗೆ ತನ್ನ ಮಗನನ್ನು ಶಾಲಾ ಪ್ರವಾಸಕ್ಕೆ ಕಳುಹಿಸಲು ಅರಸಾಳು ಶಾಲೆಗೆ ಬಿಟ್ಟು ವಾಪಾಸ್ ಹಿಂದಿರುಗುತಿದ್ದ ಸಂಧರ್ಭದಲ್ಲಿ ಹೊನ್ನಕೊಪ್ಪ ಬಸ್ ನಿಲ್ದಾಣದ ಬಳಿ ಪರಿಚಿತರೇ ಆದ ತೇಜಸ್ ,ದಾನೇಶ ಮತ್ತು ಗಿರೀಶ್ ಇರುವುದನ್ನು ಗಮನಿಸಿ ಇಲ್ಲಿ ಚಿರತೆಯ ಹಾವಳಿ ಹೆಚ್ಚಿದೆ ಬೇಗ ಹೋಗಿ ಎಂದು ಹೇಳಿದ್ದಕ್ಕೆ ಕುಪಿತರಾದ ಅವರುಗಳು ದಿನೇಶ್ ರವರನ್ನು ಅವಾಚ್ಯವಾಗಿ ನಿಂದಿಸಿ ಬಿಯರ್ ಬಾಟಲ್ ಹಾಗೂ ಕಬ್ಬಿಣದ ರಾಡ್ ನಲ್ಲಿ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.
ಸದರಿ ಪ್ರಕರಣದಲ್ಲಿ ಆರೋಪಿತರಾದ ದಾನೇಶ್ ,ತೇಜಸ್ ಮತ್ತು ಗಿರೀಶ್ ಮೇಲೆ ಪ್ರಕರಣ ದಾಖಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್