ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ.
ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.
ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ.
ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ತಲೆಗೆ ಆರು ಹೊಲಿಗೆ ಹಾಕಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.