ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ.


ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು ಭಕ್ತರೊಬ್ಬರು ಹೇಳುತಿದ್ದು,ಈ ಕ್ಷೇತ್ರದ ಪವಾಡಗಳ ಬಗ್ಗೆ ಹಲವಾರು ಘಟನೆಗಳನ್ನು ಮೆಲುಕು ಹಾಕುತಿದ್ದರು.




ಈ ಬಗ್ಗೆ ದೇವಸ್ಥಾನ ಸಮಿತಿಯ ಅಧ್ಯಕ್ಷ ಯೋಗೇಂದ್ರ ರವರ ಬಳಿ ಮಾಹಿತಿ ಕೇಳಿದಾಗ ಸಿಮೆಂಟ್ ನಲ್ಲಿ ನಿರ್ಮಿಸಿರುವ ಹುಂಡಿ ಹಾಗೂ ಕಬ್ಬಿಣದ ಬಾಕ್ಸ್ ನ್ನು ಮುರಿದು ಕಳ್ಳರು ನಿನ್ನೆಯ ದಿನ ರಾತ್ರಿ ಕಳ್ಳತನ ಮಾಡಿದ್ದಾರೆ.ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.




ಒಟ್ಟಾರೆಯಾಗಿ ರಿಪ್ಪನ್‌ಪೇಟೆ ಸುತ್ತಮುತ್ತಲಿನಲ್ಲಿ ಇತ್ತೀಚಿಗೆ ಹಲವಾರು ಕಳ್ಳತನದ ಪ್ರಕರಣಗಳು ನಡೆಯುತಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಳ್ಳುವುದು ಕಾದು ನೋಡಬೇಕಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

12 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

13 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

14 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago