ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಪ್ರತಿಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದರು.
ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದ ಅರಸಾಳು ವಲಯ ಅರಣ್ಯ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಗಾಳಿಬೈಲಿನಲ್ಲಿ ಬೋನ್ ಫಿಕ್ಸ್ ಮಾಡಿದ್ದಾರೆ.
ರಿಪ್ಪನ್ ಪೇಟೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ :
ಕಳೆದ ನಾಲ್ಕು ದಿನಗಳ ಹಿಂದೆ ರಿಪ್ಪನ್ ಪೇಟೆ- ತೀರ್ಥಹಳ್ಳಿ ರಾಜಹೆದ್ದಾರಿ ಸಮೀಪದ ಮಳವಳ್ಳಿ ಗ್ರಾಮದ ಸಂಪರ್ಕ ರಸ್ತೆಯ ಅರಣ್ಯದಲ್ಲಿ ಚಿರತೆ ಒಂದು ಹಸುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಈಗ ಮತ್ತೆ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲ್ ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.
ಈ ಕಾರ್ಯಾಚರಣೆಯಲ್ಲಿ ಅರಣ್ಯ ಅಧಿಕಾರಿಗಳಾದ ಸಿ ಮಹೇಶ್ ಉಪ ವಲಯ ಅರಣ್ಯಧಿಕಾರಿ ಬಸವರಾಜ್, ಬೀಟ್ ಫಾರೆಸ್ಟರ್ಅನಿಲ್ ರಾಠೋಡ್, ಬೀಟ್ ಫಾರೆಸ್ಟರ್ ಕಾಮನಾಯ್ಕ್
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್