ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.




ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ.

ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು ಎಲ್ಲಿಯೂ ಸಿಕ್ಕಿಬಿದ್ದಿರುವುದಿಲ್ಲ. ವೈಭವ/ಶೋಕಿ ಜೀವನಕ್ಕಾಗಿ ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ ಜಿಲ್ಲೆಯಲ್ಲಿ ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.




ಆರೋಪಿತರಿಂದ ಮೂರು ಜಿಲ್ಲೆಯಲ್ಲಿ ಒಟ್ಟೂ 18 ದೇವಸ್ಥಾನ ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿ, ಅವರುಗಳಿಂದ ಕೃತ್ಯಕ್ಕೆ ಬಳಸಿದ 1] ಮಾರುತಿ ನೆಕ್ಸಾ ಕಂಪನಿಯ ಎಸ್.ಕ್ರಾಸ್ ಕಾರ-01, ಅಕಿil 12,00,000 ರೂಪಾಯಿ, 2] ಬಜಾಜ ಪ್ಲಾಟಿನಾ ಕಂಪನಿಯ ಮೋಟಾರ ಸೈಕಲ್01, ಅಕಿll 30,000, 3] ನಗದು ಹಣ 2,29,000 ರೂಪಾಯಿ 4] 9 ಗ್ರಾಂ ತೂಕದ ದೇವರ ಬಂಗಾರದ ಆಭರಣಗಳು, ಅಕಿ 50,000, 5] 3 ಕೆ.ಜಿ 400 ಗ್ರಾಂ ತೂಕದ ದೇವರ ಬೆಳ್ಳಿಯ ಆಭರಣಗಳು, ಅಕಿ 1,80,400 ರೂಪಾಯಿ, 6] ಹಿತ್ತಾಳೆಯ 140 ಘಂಟೆಗಳು, ಅಕಿ 1,45,000 ರೂಪಾಯಿ, 7] 27 ಹಿತ್ತಾಳೆಯ ದೀಪದ ಶಮೆ, ಅಕಿll 39,550 ರೂಪಾಯಿ, 8] 22 ಹಿತ್ತಾಳೆಯ ತೂಗು ದೀಪಗಳು, ಅಕಿ 9,600 ರೂಪಾಯಿ, 9] 7 ತಾಮ್ರದ ಕೊಡಗಳು, ಅಕಿil 13,500 ರೂಪಾಯಿ, ಹಾಗೂ 8] ಇನ್ನಿತರೇ 35 ಹಿತ್ತಾಳೆ ಹಾಗೂ ತಾಮ್ರದ ಪೂಜಾ ಸಾಮಗ್ರಿಗಳು, ಅಕಿ॥ 13,235 ರೂಪಾಯಿ, 9] ಡಿ.ವಿ.ಆರ್-01, ಅಕಿ 10,000 ರೂಪಾಯಿಗಳು, ಹೀಗೆ ಒಟ್ಟು 19,20,285/- ಬೆಲೆಯ ಸ್ವತ್ತನ್ನು ಜಪ್ತುಪಡಿಸಿಕೊಂಡಿದ್ದು ಇರುತ್ತದೆ.




ವಿಷ್ಣುವರ್ಧನ್ ಎನ್. ಐ.ಪಿ.ಎಸ್. ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರಕನ್ನಡ ಜಿಲ್ಲೆ, ಕಾರವಾರ, ಸಿ.ಟಿ.ಜಯಕುಮಾರ ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು ಕಾರವಾರ, ರವಿ ನಾಯ್ಕ ಮಾನ್ಯ ಪೊಲೀಸ ಉಪಾಧೀಕ್ಷಕರು ಶಿರಸಿ ಉಪವಿಭಾಗರವರ ಮಾರ್ಗದರ್ಶನದಲ್ಲಿ. ಸುರೇಶ ಯಳ್ಳೂರ, ಪಿ.ಐ ಯಲ್ಲಾಪುರ ಪೊಲೀಸ್ ಠಾಣೆ. ಇವರ ನೇತೃತ್ವದಲ್ಲಿ ಪಿ.ಎಸ್.ಐ ರವರುಗಳಾದ ಮಂಜುನಾಥ ಗೌಡರ್‌, ಅಮೀನಸಾಬ್ ಅತ್ತಾರ, ಶ್ಯಾಮ ಪಾವಸ್ಕರ್, ಪ್ರೊ. ಪಿ.ಎಸ್.ಐ ಉದಯ, ಹಾಗೂ ಸಿಬ್ಬಂದಿಯವರಾದ ದೀಪಕ್ ನಾಯ್ಕ. ಬಸವರಾಜ ಹಗರಿ, ಮಹ್ಮದ ಶಫೀ, ಗಜಾನನ ನಾಯ್ಕ, ಪರಶುರಾಮ ಕಾಳೆ, ಪ್ರವೀಣ ಪೂಜಾರ, ಗಿರೀಶ, ನಂದೀಶ, ಹಾಗೂ ಮಹಿಳಾ ಸಿಬ್ಬಂದಿ ಶೋಭಾ ನಾಯ್ಕ, ಹಾಗೂ ಸಿ.ಡಿ.ಆರ್ ಸೆಲ್ ವಿಭಾಗದ ಉದಯ, ರಮೇಶ ಹಾಗೂ ಹಾವೇರಿ ಜಿಲ್ಲೆಯ ಹಂಸಬಾವಿ ಪೊಲೀಸ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಯವರಾದ ಮನೋಹರ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು. ಸದರಿ ಪ್ರಕರಣವನ್ನು ಪತ್ತೆ ಮಾಡಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಕಾರವಾರ ರವರು ಶ್ಲಾಘಿಸಿದ್ದು ಪ್ರಶಂಸೆ ವ್ಯಕ್ತ ಪಡಿಸಿರುತ್ತಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

15 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

15 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

15 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

20 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

22 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago