Headlines

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂಮಾಪಕ|surveyor arrested

ಜಮೀನು ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಭೂಮಾಪಕರೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಂಗನಾಥ್ ಲೋಕಾಯುಕ್ತದ ಬಲೆಗೆ ಬಿದ್ದ ಭೂಮಾಪಕ ಎಂದು ತಿಳಿದು ಬಂದಿದೆ.

ಸಾಗರ ತಾಲೂಕಿನ ತ್ಯಾಗರ್ತಿಯ ಎಡಿಎಲ್ಆರ್ ಕಚೇರಿಯಲ್ಲಿ ಭೂಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಂಗನಾಥ್, ಸಾಗರದ ನಿವಾಸಿ ಉಮೇಶ್ ಎಂಬುವವರ  ಜಮೀನು ಸರ್ವೆ ಮಾಡಲು  ಮೂರು ಸಾವಿರ ರೂ ಹಣದ ಬೇಡಿಕೆ ಇಟ್ಟಿದ್ದಾರೆ. ಮುಂಗಡವಾಗಿ 1500 ರೂ  ಪಡೆದುಕೊಂಡಿದ್ದರು.

ಉಳಿದ ಹಣವನ್ನು ಪಡೆಯುವಾಗ  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

Leave a Reply

Your email address will not be published. Required fields are marked *

Exit mobile version