ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು ಕೇಳಿಬಂದಿದೆ. ಕಾರಲ್ಲಿದ್ದ ಮತ್ತೋರ್ವ ರುದ್ರೇಶ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನ ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಲಾಗಿದೆ.
ವಿದ್ಯಾರ್ಥಿಗಳು ಶಿವಮೊಗ್ಗದಿಂದ ದಾವಣಗೆರೆಗೆ ತೆರಳುತ್ತಿದ್ದರು. ಎದುರಿನಿಂದ ಬರುತ್ತಿದ್ದ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾದ ಬಳಿಕ ಕಾರು ರಸ್ತೆ ಬದಿಗೆ ಹೋಗಿ ತಗ್ಗಿನಲ್ಲಿ ನಿಂತಿದೆ. ಗಾಯಗೊಂಡಿದ್ದ ವಿವೇಕ, ಕಾರ್ತಿಕ್ ಮತ್ತು ಮೋಹನ್ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ರುದ್ರೇಶ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೆ ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತನಿಗೆ ಚಿಕಿತ್ಸೆ ಮುಂದುವರೆದಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿ ಬಲ ಬದಿಗೆ ಹಾನಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…