Headlines

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive


ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ.



ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ ಗುಣಲಕ್ಷಣಗಳು ಕಂಡು ಬಂದಿದ್ದು, ಅವರನ್ನು ಹೋಂ ಐಸೋಲೇಷನ್​ನಲ್ಲಿ ಇಡಲಾಗಿದೆ. ಈಗಾಗಲೇ ಜಿಲ್ಲಾ‌ ಮೆಗ್ಗಾನ್ ಭೋದನಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್​ಗಳನ್ನು ತೆರೆಯಲಾಗಿದೆ.

Leave a Reply

Your email address will not be published. Required fields are marked *