ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದ್ದು, ಹೋಮ್ ಐಸೋಲೇಷನ್ಗೆ ಒಳಪಡಿಸಲಾಗಿದೆ.
ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್ಪೋರ್ಟ್ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ ಗುಣಲಕ್ಷಣಗಳು ಕಂಡು ಬಂದಿದ್ದು, ಅವರನ್ನು ಹೋಂ ಐಸೋಲೇಷನ್ನಲ್ಲಿ ಇಡಲಾಗಿದೆ. ಈಗಾಗಲೇ ಜಿಲ್ಲಾ ಮೆಗ್ಗಾನ್ ಭೋದನಾಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ಗಳನ್ನು ತೆರೆಯಲಾಗಿದೆ.