ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ.
ಬಿಸಿಎಂ ಹಾಸ್ಟೆಲ್ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳು ವಿದ್ಯಾರ್ಥಿನಿಯರಿಗೆ ಸಾಂತ್ವಾನ
ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಡಾ.ರಾಜನಂದಿನಿ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.