Headlines

ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ.

ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್ ಯಾಸೀನ್ ಎಂಬವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಇವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆಯಲಾಗಿತ್ತು.

ತುಂಗಾ ನದಿ ತೀರದಲ್ಲಿ ಶಂಕಿತರು ಸ್ಪೋಟಕಗಳ ಟ್ರಯಲ್ ಬ್ಲಾಸ್ಟ್ ನಡೆಸಿದ್ದರು. ಸಹಚರರ ಬಂಧನವಾಗುತ್ತಿದ್ದಂತೆ ಶಾರಿಕ್ ತಲೆಮರೆಸಿಕೊಂಡಿದ್ದ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಶಾರಿಕ್ ಗಾಯಗೊಂಡಿದ್ದಾನೆ.

ಮಾಜ್ ಮುನೀರ್ ಮತ್ತು ಸಯ್ಯದ್ ಯಾಸೀನ್ ಬಳಿ ಪತ್ತೆಯಾದ ಸ್ಪೋಟಕಗಳಿಗೂ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಬಳಕೆಯಾದ ಸ್ಪೋಟಕಕ್ಕೂ ಸಾಮ್ಯತೆ ಇದೆಯೆ ಸೇರಿದಂತೆ ಹಲವು ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಎನ್‌ಐಎ ಅಧಿಕಾರಿಗಳು ಶಿವಮೊಗ್ಗ ಪೊಲೀಸರಿಂದ ಸ್ಪೋಟಕಗಳು, ವಿಚಾರಣೆ ವೇಳೆ ಶಂಕಿತರು ಬಾಯಿ ಬಿಟ್ಟ ಪ್ರಮುಖ ಸಂಗತಿಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *