ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ.
ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್ ಯಾಸೀನ್ ಎಂಬವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಇವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆಯಲಾಗಿತ್ತು.
ತುಂಗಾ ನದಿ ತೀರದಲ್ಲಿ ಶಂಕಿತರು ಸ್ಪೋಟಕಗಳ ಟ್ರಯಲ್ ಬ್ಲಾಸ್ಟ್ ನಡೆಸಿದ್ದರು. ಸಹಚರರ ಬಂಧನವಾಗುತ್ತಿದ್ದಂತೆ ಶಾರಿಕ್ ತಲೆಮರೆಸಿಕೊಂಡಿದ್ದ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಶಾರಿಕ್ ಗಾಯಗೊಂಡಿದ್ದಾನೆ.
ಮಾಜ್ ಮುನೀರ್ ಮತ್ತು ಸಯ್ಯದ್ ಯಾಸೀನ್ ಬಳಿ ಪತ್ತೆಯಾದ ಸ್ಪೋಟಕಗಳಿಗೂ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಬಳಕೆಯಾದ ಸ್ಪೋಟಕಕ್ಕೂ ಸಾಮ್ಯತೆ ಇದೆಯೆ ಸೇರಿದಂತೆ ಹಲವು ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಎನ್‌ಐಎ ಅಧಿಕಾರಿಗಳು ಶಿವಮೊಗ್ಗ ಪೊಲೀಸರಿಂದ ಸ್ಪೋಟಕಗಳು, ವಿಚಾರಣೆ ವೇಳೆ ಶಂಕಿತರು ಬಾಯಿ ಬಿಟ್ಟ ಪ್ರಮುಖ ಸಂಗತಿಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…