ರಿಪ್ಪನ್‌ಪೇಟೆ : ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ಅಧಿಕಾರಾವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಜಮೀನು ಸಾಗುವಳಿದಾರ ರೈತ ಕುಟುಂಬಕ್ಕೆ ಸಾಗುವಳಿ ಪತ್ರವನ್ನು ಕೊಡಿಸಿದ್ದರೂ ಅಲ್ಲದೆ ಇನ್ನೂ ಹಲವು ರೈತರ ಹಕ್ಕು ಪತ್ರವನ್ನು ತಹಶೀಲ್ದಾರ್ ಕಛೇರಿಯಲ್ಲಿ ಸಿದ್ದಗೊಂಡಿದ್ದರೂ ಕೂಡಾ ಕಳೆದ ನಾಲ್ಕುವರೆ ವರ್ಷದಿಂದ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಕ್ಕು ಪತ್ರ ಕೊಡದೇ ಸಿದ್ದಗೊಂಡ ಸಾಗುವಳಿ ಪತ್ರವನ್ನು ವಜಾಗೊಳಿಸಿ ಈಗ ಚುನಾವಣೆಗೆ ಮೂರು ನಾಲ್ಕು ತಿಂಗಳುಗಳಿರುವಾಗ ಮೊಸಳೆ ಕಣ್ಣಿರು ಹಾಕುವ ಮೂಲಕ ಶರಾವತಿ ಸಂತ್ರಸ್ಥರ ಪರವಾಗಿ ಗಿಮಿಕ್ ರಾಜಕಾರಣಕ್ಕೆ ಮುಂದಾಗಿದ್ದಾರೆಂದು ಅರಸಾಳು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಉಮಾಕರ ಅರೋಪಿಸಿದರು.
ರಿಪ್ಪನ್‌ಪೇಟೆಯಲ್ಲಿ ಇತ್ತೀಚೆಗೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರರ ಬಗ್ಗೆ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು ಸುದ್ದಿಗೋಷ್ಠಿಯಲ್ಲಿ ಅಪಮಾನಿಸಿ ಮಾತನಾಡಿರುವುದನ್ನು ಖಂಡಿಸಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ಶಾಸಕ ಎರಡು ಭಾರಿ ಶಾಸಕರಾದವರು ಅವರಿಗೆ ಜನರ ನಾಡಿ ಮಿಡಿತ ಗೊತ್ತಿದೆ ಅವರ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಬಿ.ಜೆ.ಪಿ ಪಕ್ಷದವರಿಗಿಲ್ಲ ಮತ್ತು ಹಾಲಿ ಶಾಸಕ ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಿಸಿದಾಗ ಶರಾವತಿ ಸಂತ್ರಸ್ಥರ ಪರವಾಗಿ ಮಾತನಾಡಿ ಮತ ಪಡೆದು ಗೆಲುವು ಸಾಧಿಸಿದವರು ಮಂತ್ರಿಯಾದವರು ಈಗ ಪುನ: ಚುನಾವಣೆ ಸಮೀಪಿಸುತ್ತಿರುವುದರಿಂದಾಗಿ ಸಂತ್ರಸ್ಥರನ್ನು ಧರ್ಮಸ್ಥಳಕ್ಕೆ ಹಾಗೂ ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗುವುದರೊಂದಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇದೊಂದು ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಇನ್ನೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿದರೆ ನಾವು ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮಾಜಿ ಶಾಸಕ ಗೋಪಾಲಕೃಷ್ಣರಿಗೆ ಅನುಭವ ಇಲ್ಲವೆಂದು ಹೇಳುವ ಬಿಜೆಪಿ ಶಾಸಕ ಹರತಾಳು ಹಾಲಪ್ಪನವರಿಗೆ ಅನುಭವ ಇದೆಯಲ್ಲ ಏಕೆ ಕೇಂದ್ರ ಮತ್ತು ರಾಜ್ಯ ಡಬಲ್ ಇಂಜಿನ್ ಸರ್ಕಾರದಲ್ಲಿ ಮಾತನಾಡಲ್ಲಿಲ್ಲ ಎಂದು ಪತ್ರಕರ್ತರು ಪ್ರಶ್ನಿಸುತ್ತಿಲ್ಲ ಎಂದು ಕೇಳಿದರು.
ಶಾಸಕರಿಗೆ ತಾಕತ್ತು ದಮ್ಮ ಇದ್ದರೆ ಬರುವ ಮೂರು ತಿಂಗಳಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥ ರೈತ ಕುಟುಂಬಕ್ಕೆ ಸಾಗುವಳಿ ಪತ್ರ ಕೊಡಿಸಲಿ ಎಂದು ಸವಾಲು ಹಾಕಿದ ಅವರು ಚುನಾವಣೆ ಬಂದರೆ ಮಾತ್ರ ಸಂತ್ರಸ್ಥರ ನೆನಪು ಮಾಡಿಕೊಳ್ಳುತ್ತಾರೆ ಉಳಿದಂತೆ ಅವರಿಗೆ ಮೆರೆತು ಹೋಗುತ್ತದೆಂದು ಅಕ್ರೋಶ ವ್ಯಕ್ತ ಪಡಿಸಿ ಬಿಜೆಪಿ ಕಾರ್ಯಕರ್ತ ಗಿರೀಶ್ ಅಚಾರ್ ಇವರಿಂದ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಶಕ್ತಿ ಅರ್ಜಿಸಲ್ಲಿಸಲು ಶಾಸಕರೇ ಸಹಕರಿಸಿದ್ದಾರೆಂದು ಆರೋಪಿಸಿದರು.
ಹೋಬಳಿ ಘಟಕದ ಬ್ಲಾಕ್ ಅಧ್ಯಕ್ಷ ಆಶೀಫ್ ಭಾಷಾ ಮಾತನಾಡಿ ದೇಶ-ರಾಜ್ಯಕ್ಕೆ ಬೆಳಕು ಕೊಡುವ ಉದ್ದೇಶದಿಂದ ಮನೆಮಠವನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಈವರೆಗೂ ಭೂ ಒಡೆತನದ ಹಕ್ಕು ಕೊಡಿಸುವಲ್ಲಿ ಕ್ಷೇತ್ರದ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ.ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ೯೪ ಸಿ ಅಡಿ ಮತ್ತು ಬಗರ್ ಹುಕುಂ ಸಕ್ರಮದಲ್ಲಿ ಹಲವರಿಗೆ ಹಕ್ಕು ಪತ್ರ ನೀಡಿದ್ದರೂ ಅದನ್ನು ಇಂದಿನ ಶಾಸಕರು ವಜಾಗೊಳಿಸಿ ರೈತರನ್ನು ಕಣೀರಿನಲ್ಲಿ ಕೈತೊಳೆಯುವಂತಾ ಮಾಡಿದ್ದಾರೆಂದು ಆರೋಪಿಸಿ ಈಗ ಚುನಾವಣೆ ವರ್ಷವಾಗಿರುವಾಗ ಸಂತ್ರಸ್ಥರ ಪರವೆಂದು ಹೇಳಿ ರೈತರನ್ನು ದಾರಿ ತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಮತದಾರರ ಓಲೈಕೆಗಾಗಿ ಇಂತಹ ನಾಟಕವಾಡುತ್ತಿದ್ದಾರೆಂದರು. ಇನ್ನೂ ಮುಂದೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ವಿರುದ್ದ ಅವಹೇಳನಕಾರಿ ಹೇಳಿಕೆ ನೀಡುವ ಮುನ್ನ ಯೋಚಿಸಿ ಎಚ್ಚರಿಕೆಯಿಂದ ಮಾತನಾಡಿ ಎಂದು ಬಿಜೆಪಿ ಮುಖಂಡರಿಗೆ ಪರೋಕ್ಷ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್, ರಿಪ್ಪನ್‌ಪೇಟೆ ಗ್ರಾ.ಪಂ.ಸದಸ್ಯರಾದ ಡಿ.ಈ.ಮಧುಸೂದನ್, ಎನ್.ಚಂದ್ರೇಶ್,ಪ್ರಕಾಶ್ ಪಾಲೇಕರ್,ಗಣಪತಿ,ಎಪಿಎಂಸಿ ಮಾಜಿ ನಿರ್ದೇಶಕ ಬೈರಪ್ಪ,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್,
ಗ್ರಾಪಂ ಮಾಜಿ ಸದಸ್ಯ ಆರ್.ಹೆಚ್.ಶ್ರೀನಿವಾಸ ಅಚಾರ್,ನವೀನ್ ಕೆರೆಹಳ್ಳಿ ಇನ್ನಿತರರು ಹಾಜರಿದ್ದರು.