ಶಾಸಕ ಹಾಲಪ್ಪನವರಿಗೆ ಚುನಾವಣೆ ಸಮೀಪಿಸುವಾಗ ಶರಾವತಿ ಸಂತ್ರಸ್ಥರು ನೆನಪಾಗುತ್ತಾರೆ – ಕಾಂಗ್ರೆಸ್ ಆರೋಪ|congress

ರಿಪ್ಪನ್‌ಪೇಟೆ : ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ಅಧಿಕಾರಾವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಜಮೀನು ಸಾಗುವಳಿದಾರ ರೈತ ಕುಟುಂಬಕ್ಕೆ ಸಾಗುವಳಿ ಪತ್ರವನ್ನು ಕೊಡಿಸಿದ್ದರೂ ಅಲ್ಲದೆ ಇನ್ನೂ ಹಲವು ರೈತರ ಹಕ್ಕು ಪತ್ರವನ್ನು ತಹಶೀಲ್ದಾರ್ ಕಛೇರಿಯಲ್ಲಿ ಸಿದ್ದಗೊಂಡಿದ್ದರೂ ಕೂಡಾ ಕಳೆದ ನಾಲ್ಕುವರೆ ವರ್ಷದಿಂದ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಕ್ಕು ಪತ್ರ ಕೊಡದೇ ಸಿದ್ದಗೊಂಡ ಸಾಗುವಳಿ ಪತ್ರವನ್ನು ವಜಾಗೊಳಿಸಿ ಈಗ ಚುನಾವಣೆಗೆ ಮೂರು ನಾಲ್ಕು ತಿಂಗಳುಗಳಿರುವಾಗ ಮೊಸಳೆ ಕಣ್ಣಿರು ಹಾಕುವ ಮೂಲಕ ಶರಾವತಿ ಸಂತ್ರಸ್ಥರ ಪರವಾಗಿ ಗಿಮಿಕ್ ರಾಜಕಾರಣಕ್ಕೆ ಮುಂದಾಗಿದ್ದಾರೆಂದು ಅರಸಾಳು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಉಮಾಕರ ಅರೋಪಿಸಿದರು.




ರಿಪ್ಪನ್‌ಪೇಟೆಯಲ್ಲಿ ಇತ್ತೀಚೆಗೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರರ ಬಗ್ಗೆ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು ಸುದ್ದಿಗೋಷ್ಠಿಯಲ್ಲಿ ಅಪಮಾನಿಸಿ ಮಾತನಾಡಿರುವುದನ್ನು ಖಂಡಿಸಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ಶಾಸಕ ಎರಡು ಭಾರಿ ಶಾಸಕರಾದವರು ಅವರಿಗೆ ಜನರ ನಾಡಿ ಮಿಡಿತ ಗೊತ್ತಿದೆ ಅವರ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಬಿ.ಜೆ.ಪಿ ಪಕ್ಷದವರಿಗಿಲ್ಲ ಮತ್ತು ಹಾಲಿ ಶಾಸಕ ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಿಸಿದಾಗ ಶರಾವತಿ ಸಂತ್ರಸ್ಥರ ಪರವಾಗಿ ಮಾತನಾಡಿ ಮತ ಪಡೆದು ಗೆಲುವು ಸಾಧಿಸಿದವರು ಮಂತ್ರಿಯಾದವರು ಈಗ ಪುನ: ಚುನಾವಣೆ ಸಮೀಪಿಸುತ್ತಿರುವುದರಿಂದಾಗಿ ಸಂತ್ರಸ್ಥರನ್ನು ಧರ್ಮಸ್ಥಳಕ್ಕೆ ಹಾಗೂ ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗುವುದರೊಂದಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇದೊಂದು ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಇನ್ನೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ಇಂತಹ ಬೇಜವಾಬ್ದಾರಿ  ಹೇಳಿಕೆ ನೀಡಿದರೆ ನಾವು ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಜಿ ಶಾಸಕ ಗೋಪಾಲಕೃಷ್ಣರಿಗೆ ಅನುಭವ ಇಲ್ಲವೆಂದು ಹೇಳುವ ಬಿಜೆಪಿ ಶಾಸಕ ಹರತಾಳು ಹಾಲಪ್ಪನವರಿಗೆ ಅನುಭವ ಇದೆಯಲ್ಲ ಏಕೆ ಕೇಂದ್ರ ಮತ್ತು ರಾಜ್ಯ ಡಬಲ್ ಇಂಜಿನ್ ಸರ್ಕಾರದಲ್ಲಿ ಮಾತನಾಡಲ್ಲಿಲ್ಲ ಎಂದು ಪತ್ರಕರ್ತರು ಪ್ರಶ್ನಿಸುತ್ತಿಲ್ಲ ಎಂದು ಕೇಳಿದರು.

ಶಾಸಕರಿಗೆ ತಾಕತ್ತು ದಮ್ಮ ಇದ್ದರೆ ಬರುವ ಮೂರು ತಿಂಗಳಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥ ರೈತ ಕುಟುಂಬಕ್ಕೆ ಸಾಗುವಳಿ ಪತ್ರ ಕೊಡಿಸಲಿ ಎಂದು  ಸವಾಲು ಹಾಕಿದ ಅವರು ಚುನಾವಣೆ ಬಂದರೆ ಮಾತ್ರ ಸಂತ್ರಸ್ಥರ ನೆನಪು ಮಾಡಿಕೊಳ್ಳುತ್ತಾರೆ ಉಳಿದಂತೆ ಅವರಿಗೆ ಮೆರೆತು ಹೋಗುತ್ತದೆಂದು ಅಕ್ರೋಶ ವ್ಯಕ್ತ ಪಡಿಸಿ ಬಿಜೆಪಿ ಕಾರ್ಯಕರ್ತ ಗಿರೀಶ್ ಅಚಾರ್ ಇವರಿಂದ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಶಕ್ತಿ ಅರ್ಜಿಸಲ್ಲಿಸಲು ಶಾಸಕರೇ ಸಹಕರಿಸಿದ್ದಾರೆಂದು ಆರೋಪಿಸಿದರು.




ಹೋಬಳಿ ಘಟಕದ ಬ್ಲಾಕ್ ಅಧ್ಯಕ್ಷ ಆಶೀಫ್ ಭಾಷಾ ಮಾತನಾಡಿ ದೇಶ-ರಾಜ್ಯಕ್ಕೆ ಬೆಳಕು ಕೊಡುವ ಉದ್ದೇಶದಿಂದ ಮನೆಮಠವನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಈವರೆಗೂ ಭೂ ಒಡೆತನದ ಹಕ್ಕು ಕೊಡಿಸುವಲ್ಲಿ ಕ್ಷೇತ್ರದ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ.ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ೯೪ ಸಿ ಅಡಿ ಮತ್ತು ಬಗರ್ ಹುಕುಂ ಸಕ್ರಮದಲ್ಲಿ ಹಲವರಿಗೆ ಹಕ್ಕು ಪತ್ರ ನೀಡಿದ್ದರೂ ಅದನ್ನು ಇಂದಿನ ಶಾಸಕರು ವಜಾಗೊಳಿಸಿ ರೈತರನ್ನು ಕಣೀರಿನಲ್ಲಿ ಕೈತೊಳೆಯುವಂತಾ ಮಾಡಿದ್ದಾರೆಂದು ಆರೋಪಿಸಿ ಈಗ ಚುನಾವಣೆ ವರ್ಷವಾಗಿರುವಾಗ ಸಂತ್ರಸ್ಥರ ಪರವೆಂದು ಹೇಳಿ ರೈತರನ್ನು ದಾರಿ ತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಮತದಾರರ ಓಲೈಕೆಗಾಗಿ ಇಂತಹ ನಾಟಕವಾಡುತ್ತಿದ್ದಾರೆಂದರು. ಇನ್ನೂ ಮುಂದೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ವಿರುದ್ದ ಅವಹೇಳನಕಾರಿ ಹೇಳಿಕೆ ನೀಡುವ ಮುನ್ನ ಯೋಚಿಸಿ ಎಚ್ಚರಿಕೆಯಿಂದ ಮಾತನಾಡಿ ಎಂದು ಬಿಜೆಪಿ ಮುಖಂಡರಿಗೆ ಪರೋಕ್ಷ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್, ರಿಪ್ಪನ್‌ಪೇಟೆ ಗ್ರಾ.ಪಂ.ಸದಸ್ಯರಾದ  ಡಿ.ಈ.ಮಧುಸೂದನ್, ಎನ್.ಚಂದ್ರೇಶ್,ಪ್ರಕಾಶ್ ಪಾಲೇಕರ್,ಗಣಪತಿ,ಎಪಿಎಂಸಿ ಮಾಜಿ ನಿರ್ದೇಶಕ ಬೈರಪ್ಪ,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್,
ಗ್ರಾಪಂ ಮಾಜಿ ಸದಸ್ಯ ಆರ್.ಹೆಚ್.ಶ್ರೀನಿವಾಸ ಅಚಾರ್,ನವೀನ್ ಕೆರೆಹಳ್ಳಿ ಇನ್ನಿತರರು ಹಾಜರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

5 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

6 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

6 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

11 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

12 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago