ಜನನಿಬಿಡ ಸ್ಥಳಗಳಲ್ಲಿ ಗುಂಪು ಗುಂಪಾಗಿ ಕಾಡುಕೋಣ ಕಾಣಿಸಿಕೊಂಡ ಪರಿಣಾಮ ಸ್ಥಳೀಯರು ಭಯಭೀತರಾದ ಘಟನೆ ಶಿವಮೊಗ್ಗ ಜಿಲ್ಲೆಯ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.
ಕಲ್ಲುಕೊಪ್ಪದ ಗ್ರಾಮದ ಭಾಗದಲ್ಲಿ ಹಿಂಡುಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅಧಿಕ ಭಯ ಹುಟ್ಟಿಸಿವೆ. ಏಕಾಏಕಿ 16 ಕಾಡುಕೋಣಗಳು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕವನ್ನು ದುಪ್ಪಟ್ಟುಗೊಳಿಸಿವೆ.
ಕಾಡುಕೋಣಗಳು ಚಿರತೆ ಹುಲಿಯಷ್ಟು ಅಪಾಯಕಾರಿಯಾಗದೆ ಇದ್ದರೂ ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿರುವ ಉದಾಹರಣೆಗಳಿದೆ.
ಕಾಡುಕೋಣಗಳು ಗುಂಪು ಗುಂಪಾಗಿ ರಾಜರೋಷವಾಗಿ ಸುತ್ತಾಡುತ್ತಿರುವುದನ್ನು ಕಂಡು ಸ್ಥಳೀಯರು ಭಯಭೀತರಾಗಿ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.