ಸೌಂದರ್ಯ ಮತ್ತು ಸಂಪತ್ತು ಶಾಶ್ವತವಲ್ಲ – ಧರ್ಮವೊಂದೆ ಶಾಶ್ವತ : ಮಳಲಿ ಶ್ರೀಗಳು|Ramakrishna school

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಿಗೆ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರೊಂದಿಗೆ ಗುರು ಹಿರಿಯರನ್ನು ಪ್ರೀತಿ ವಿಶ್ವಾಸ ಗೌರವಾದರದಿಂದ ಕಾಣುವ ಗುಣವನ್ನು ಕಲಿಸಬೇಕು. ವಿದ್ಯ ಕದಿಯಲಾರದ ವಸ್ತುವಾಗಿದ್ದು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ  ದಾನ ಮಾಡಬೇಕು ರೂಪ ಮತ್ತು  ಹಣ ಶಾಶ್ವತವಲ್ಲ ಧರ್ಮವೊಂದೆ ಶಾಶ್ವತ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.

ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ  ಶಾಲಾ ವಾರ್ಷೀಕೋತ್ಸವ ಮತ್ತು ಶ್ರೀಮಾತೆ ಶಾರದಾದೇವಿಯ ಜಯಂತಿ ಮಹೋತ್ಸವ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಶೀರ್ವಚನ ನೀಡಿ ಹೂವು ತನ್ನ ಸುವಾಸನೆಯನ್ನು ಹೊರ ಸೂಸುವಂತೆ ವಿದ್ಯಾರ್ಥಿಗಳಲ್ಲಿ ತ್ಯಾಗ ಗುಣ ವಿದ್ಯೆ ವಿನಯ ಕೀರ್ತಿಯು ದಶದಿಕ್ಕಿನಲ್ಲಿ ಪಸರಿಸುವಂತಾಗಲು ಸತತ ಪರಿಶ್ರಮದಿಂದ ಅಭ್ಯಾಸ ಮಾಡಬೇಕು ಎಂದು ಮಕ್ಕಳಿಗೆ ತಿಳಿಹೇಳಿದ ಶ್ರೀಗಳು ವಿದ್ಯಾರ್ಥಿಗಳಲ್ಲಿ ಪಠೇತರ ಚಟುವಟಿಕೆಯ ಮೂಲಕ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಪ್ರೇರಣೆಯಾಗುವುದೆಂದು ಹೇಳಿದರು.




ಕಸ್ತೂರಿ ಕನ್ನಡಸಂಘದ ಅಧ್ಯಕ್ಷ ಮೆಣಸೆ ಆನಂದ ಮಾತನಾಡಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಾಹಿತ್ಯ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಯ  ಬಗ್ಗೆ ಪ್ರೇರಣೆಯನ್ನು ನೀಡಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂದು ತಮ್ಮಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯದ ಮೂಲಕ ರಾಷ್ಟ್ರಮಟ್ಟದಲ್ಲೂ ಮಿಂಚಬಹುದು ಎನ್ನುವುದಕ್ಕೆ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆ  ಉದಾಹರಣೆ ಯಾಗಿದೆ. ಈ ಶಿಕ್ಷಣ ಸಂಸ್ಥೆಯಲ್ಲಿ  ಇಂದು ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿರುವುದು ಸಂತಸದ ಸಂಗತಿ ಎಂದರು.

ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ದೇವರಾಜ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಳೆದ ವರ್ಷದ ಎಸ್.ಎಸ್.ಎಲ್.ಸಿ. ವಾರ್ಷೀಕ ಪಬ್ಲಿಕ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿ ಗೌರವಿಸಲಾಯಿತು.




ರಾಮಕೃಷ್ಣ ವಿದ್ಯಾಲಯದ  ಸಂಸ್ಥಾಪಕ ಅಧ್ಯಕ್ಷ ದೇವರಾಜ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸರಿತಾ ದೇವರಾಜ್ ನೆರವೇರಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

15 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

15 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

15 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

21 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

22 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago