ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ.
ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ.
ಈತ ಹಮಾಲಿ ಕೆಲಸ ಮಾಡುತ್ತಿದ್ದು, ಪ್ರತ್ಯೇಕ ಮನೆಯಲ್ಲಿ ವಾಸಿಸುತ್ತಿದ್ದ. ಆಗಾಗ ತಾಯಿಯ ಮನೆಗೂ ಬಂದುಹೋಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯಿಂದ 2.50 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.