ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ.
ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ
ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ.
ಕೂಡ್ಲಿಕೊಪ್ಪ ಸ್ವಾಮಿ ಅವರ ಕುಟುಂಬ ಜೀವನಕ್ಕಾಗಿ ಕೃಷಿ ಕೂಲಿ ಕಾರ್ಮಿಕರಾಗಿದ್ದು ಅಗ್ನಿ ಅವಗಘಡದಿಂದ ಸ್ವಾಮಿ ಅವರ ಮನೆ ಪರಿಕರ ಸಂಪೂರ್ಣ ನಾಶವಾಗಿದ್ದು,ಉಟ್ಟ ಬಟ್ಟೆ ಬಿಟ್ಟರೆ ಅವರ ಪಾಲಿಗೆ ಮತ್ತೇನೆನೂ ಉಳಿದಿಲ್ಲ.
ಈ ಕೂಡಲೇ ಸಂಬಂಧಪಟ್ಟ ಗ್ರಾಮಡಳಿತ ಹಾಗೂ ಇಲಾಖೆ ಇತ್ತ ಗಮನಹರಿಸಿ ಸರ್ಕಾರದಿನ ಸಿಗಬೇಕಾದ ಪರಿಹಾರ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ..
ಕುಟುಂಬ ಅತಿ ಕಡು ಬಡ ಕುಟುಂಬವಾಗದ್ದು . ಕೂಲಿ ಕೆಲಸ ಮಾಡಿ ಜೀವನ ನೆಡಸುತ್ತಿರುತ್ತಾರೆ. ಹಾಗೂ ಇಬ್ಬರು ಸಣ್ಣ ಮಕ್ಕಳು ಇದ್ದು ಕುಟುಂಬದ ಕಷ್ಟವನ್ನು ಅರಿತು ಗ್ರಾಮಸ್ಥರು ಹಾಗೂ ಸಹಕರಿಸುವಂತೆ ಕೋರಿದ್ದಾರೆ. ಈ ಬಡ ಕುಟುಂಬಕ್ಕೆ ಸಹಾಯ ಮಾಡಲು ಇಚ್ಚಿಸುವವರು ಈ ಕೆಳಗಿನ ನಂಬರ್ ಗೆ ಸಂಪರ್ಕಿಸಲು ಕೋರಿದೆ.
ಮಹೇಶ್ ಎಸ್ ಬಾಣಿಗ 9844733213,ಇಂದ್ರೇಶ್ ಎನ್ ಹೊಸಕೆಸರೆ 8951474804,ಮನೋದರ ಕಚ್ಚಿಗೆಬೈಲ್ 99019 83727
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…