ಇನ್ನೊವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದು ಕಾರು ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಹೋಬಳಿ ಮತ್ತಿ ಮನೆ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇನ್ನೊವಾ ಕಾರಿನ ಚಾಲಕ ಸಿದ್ದರಾಜು ಎಂಬುವರ ಕಾಲಿಗೆ, ಹೊಟ್ಟೆಗೆ ಹಾಗೂ ಕಿವಿಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.
ಕಾರು ಮೈಸೂರಿನಿಂದ ಸಿಗಂದೂರು ಕಡೆಗೆ ತೆರಳುತಿದ್ದು ಹೊರಟಿದ್ದು ತಮಿಳುನಾಡಿನ ನೊಂದಣಿಯ ಲಾರಿ ನಡುವೆ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.