ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂಮಾಪಕ|surveyor arrested

ಜಮೀನು ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಭೂಮಾಪಕರೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಂಗನಾಥ್ ಲೋಕಾಯುಕ್ತದ ಬಲೆಗೆ ಬಿದ್ದ ಭೂಮಾಪಕ ಎಂದು ತಿಳಿದು ಬಂದಿದೆ. ಸಾಗರ ತಾಲೂಕಿನ ತ್ಯಾಗರ್ತಿಯ ಎಡಿಎಲ್ಆರ್ ಕಚೇರಿಯಲ್ಲಿ ಭೂಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಂಗನಾಥ್, ಸಾಗರದ ನಿವಾಸಿ ಉಮೇಶ್ ಎಂಬುವವರ  ಜಮೀನು ಸರ್ವೆ ಮಾಡಲು  ಮೂರು ಸಾವಿರ ರೂ ಹಣದ ಬೇಡಿಕೆ ಇಟ್ಟಿದ್ದಾರೆ. ಮುಂಗಡವಾಗಿ 1500 ರೂ  ಪಡೆದುಕೊಂಡಿದ್ದರು. ಉಳಿದ ಹಣವನ್ನು ಪಡೆಯುವಾಗ  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ…

Read More

ವಿದ್ಯುತ್ ಸ್ಪರ್ಶದಿಂದ ಯುವಕ ಸಾವು|electric shock

ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ನಗರದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಂತಿನಗರದ ನಿವಾಸಿ ರೂಪ್ ಸಿಂಗ್ (33) ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್‌ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ…

Read More

ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು. ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು…

Read More

ನಾಳೆ(09-12-2022) ಸಂಜೆ 7 ರಿಂದ 12 ಗಂಟೆ ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್ – ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ಪ್ರಕಟಣೆ|Ripponpet

ರಿಪ್ಪನ್‌ಪೇಟೆ : ಕುಂಸಿ – ಆನಂದಪುರ ರೈಲ್ವೆ ಮಾರ್ಗದ ಲೆವೆಲ್ ಕ್ರಾಸಿಂಗ್ ನಂ 92 ರಲ್ಲಿ ತಾಂತ್ರಿಕ ಪರಿಶೀಲನೆ ಇರುವುದರಿಂದ 12 ಗಂಟೆಗಳ ಕಾಲ ರಿಪ್ಪನ್‌ಪೇಟೆ ಯಿಂದ ಆಯನೂರು ಮಾರ್ಗ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ರೈಲ್ವೆ ಗೇಟ್ ಸಂಖ್ಯೆ 92 ರಲ್ಲಿ (ಆರಸಾಳು ಗ್ರಾಮದಲ್ಲಿರುವ ರೈಲ್ವೆ ಗೇಟ್) ತಾಂತ್ರಿಕವಾಗಿ ಪರಿಶೀಲನೆ ಮಾಡಲು ದಿನಾಂಕ 09-12-22ರ ಸಂಜೆ 7:೦೦ ಗಂಟೆಯಿಂದ 10-12-22ರ ಬೆಳಿಗ್ಗೆ 7:೦೦ ಗಂಟೆಯವರೆಗೆ ಗೇಟನ್ನು ಮುಚ್ಚುವುದರಿಂದ ತಾತ್ಕಾಲಿಕ  ಪರ್ಯಾಯ ಮಾರ್ಗಗಳು…

Read More

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟ – ಟ್ರಾಫಿಕ್ ಜಾಮ್ ಗೆ ತತ್ತರಿಸಿದ ಪ್ರಯಾಣಿಕರು|Agumbe

ಆಗುಂಬೆಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು….

Read More

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಬೇಕು : ಎಂ ಶ್ರೀಕಾಂತ್|Jds

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಎಂ.ಶ್ರೀಕಾಂತ್ ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಮೊಗ್ಗದ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಬೂತ್ ಮಟ್ಟದ ಕಮಿಟಿ ನಿರ್ಮಾಣ ಮಾಡುವುದು ಮತ್ತು ಪ್ರತಿ ಕ್ಷೇತ್ರದಿಂದ 50 ಅಲ್ಪಸಂಖ್ಯಾತ ಪ್ರಮುಖರ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರಮುಖರು ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಾದ ಆಯುಷ್ ಮತ್ತು ಅನೀಶ್ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ಆಯುಷ್ 800 ಮೀ ಹಾಗೂ 1500 ಮೀ ಓಟ ಸ್ಪರ್ದೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7 ನೇ ತರಗತಿಯ ಅನೀಶ್ 100 ಮೀ ಓಟದಲ್ಲಿ…

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More

ಹೊಸನಗರ : ಭತ್ತದ ಒಕ್ಕಲು ಯಂತ್ರಕ್ಕೆ ಸಿಲುಕಿ ರೈತನ ಕೈ ಕಟ್|Hosanagar

ಹೊಸನಗರ : ಒಕ್ಕಲು ಮಾಡುವಾಗ ಮಿಷನ್ ಗೆ ಸಿಲುಕಿ ರೈತನ ಕೈ ತುಂಡಾಗಿದೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಹೊಸನಗರ ತಾಲೂಕು ದೇವಗಂಗೆ ಗ್ರಾಮದ ರೈತ ವಿಶ್ವಾನಾಥ್ ಅವರ ಬಲಗೈ ತುಂಡಾಗಿದೆ. ಗ್ರಾಮದ ಮಹೇಶ ಗೌಡ ಎಂಬುವವರ ಜಮೀನಿನಲ್ಲಿ ಭತ್ತದ ಒಕ್ಕಲು ಮಾಡಲಾಗುತ್ತಿತ್ತು. ಈ ವೇಳೆ ವಿಶ್ವನಾಥ್ ಅವರ ಬಲಗೈ ಒಕ್ಕಲು ಯಂತ್ರಕ್ಕೆ ಸಿಲುಕಿ ತುಂಡಾಗಿದೆ. ತಕ್ಷಣ ವಿಶ್ವನಾಥ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ…

Read More

ಆನಂದಪುರ : ಉರುಳಿಗೆ ಸಿಲುಕಿ ಪ್ರಾಣ ಬಿಟ್ಟ ಚಿರತೆ|Leopard

ಆನಂದಪುರ ವಲಯ ಅರಣ್ಯದ ಚೋರಡಿ ತುಪ್ಪೂರು ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಿದೆ. ಅದೇ ರೀತಿ ವನ್ಯ ಪ್ರಾಣಿಗಳ ಭೇಟೆ ಕೂಡ ಅವ್ಯಾಹತವಾಗಿ ನಡೆಯುತ್ತಿದೆ. ಜಮೀನಿಗೆ ಲಗ್ಗೆ ಇಡುವ ಕಾಡುಹಂದಿಗಳ ಬೇಟೆಗೆ ಉರುಳು ಹಾಕುವುದು, ಎಲೆಕ್ಟ್ರಿಕ್ ಕರೆಂಟ್ ಕೊಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ಪೂರಕ ಎಂಬಂತೆ,  ಆನಂದಪುರ ರೇಂಜ್ ನ ಚೋರಡಿ ಸಮೀಪದ ಕೋಣೆಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹಾಕಿದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣಬಿಟ್ಟಿದೆ.  ಸುಮಾರು 5 ರಿಂದ 6 ವರ್ಷ ಪ್ರಾಯದ ಗಂಡು…

Read More