Headlines

ವರದಕ್ಷಿಣೆ ಕಿರುಕುಳ : ನವವಿವಾಹಿತೆ ಆತ್ಮಹತ್ಯೆ|sucide

ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ದಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ದಿಗಟೆಕೊಪ್ಪ ಗ್ರಾಮದ  23ವರ್ಷದ ಸುಶ್ಮಿತಾ ನೇಣಿಗೆ ಶರಣಾದ ಗೃಹಿಣಿಯಾಗಿದ್ದಾರೆ.ಕಳೆದ ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಮೃತ ಸುಷ್ಮಿತಾ ಮನೆಯ ಶೌಚಗೃಹದಲ್ಲಿ ವೇಲ್ ನಿಂದ ನೇಣಿಗೆ ಶರಣಾಗಿದ್ದು, ಈ ಸಂಬಂಧ ಪತಿ ಹಾಗೂ ಅತ್ತೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ತನ್ನ ಮಗಳಿಗೆ ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೃತಳ ತಂದೆ…

Read More

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ : ಸದನದಲ್ಲಿ ಗುಡುಗಿದ ಶಾಸಕ ಹರತಾಳು ಹಾಲಪ್ಪ|halappa

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸದನದಲ್ಲಿ ಗುಡುಗಿದ್ದಾರೆ. ಅಧಿವೇಶನದಲ್ಲಿ ಮಾತನಾಡುತ್ತಾ ಶರಾವತಿ ಮುಳುಗಡೆ ಸಂತ್ರಸ್ಥರನ್ನು ತೆರವುಗೊಳಿಸಲು ಹೊರಟರೆ ರಕ್ತಕ್ರಾಂತಿಯೊಂದಿಗೆ ಸಾಮೂಹಿಕ ಆತ್ಮಹತ್ಯೆ ನಡೆಯುತ್ತದೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದರು. ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಿಸಲು ಸರ್ಕಾರ ಸುಮಾರು 8 ಸಾವಿರ ಕುಟುಂಬಗಳನ್ನು ರಾತ್ರೋರಾತ್ರಿ ಎಬ್ಬಿಸಿ, ಬೇರೆ ಬೇರೆ ಕಡೆಗಳಲ್ಲಿ ತಂದು ಬಿಟ್ಟಿತು. ಈಗಲೂ ಇವರ ಹೆಸರಿಗೆ…

Read More

ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಸಮೀಪದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಪರವಾನಗಿ ನೀಡದಂತೆ ಮನವಿ|Ripponpet

ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ…

Read More

ಆನಂದಪುರ ಸುತ್ತಮುತ್ತ ಪ್ರತ್ಯೇಕ ಮೂರು ರಸ್ತೆ ಅಪಘಾತ ಪ್ರಕರಣ – ಓರ್ವ ಸಾವು|accident

ಘಟನೆ 1: ಆನಂದಪುರ ಸಮೀಪ ಕೆ ಎಸ್ಆರ್ ಟಿ ಸಿ ಬಸ್ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಬೆಳ್ಳಂ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೆಂಗಳೂರಿನಿಂದ ಪ್ರವಾಸಕ್ಕೆಂದು ಜೋಗ ವೀಕ್ಷಣೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ…

Read More

ಹುಂಚ : ಬೈಕ್‌ ನಿಲ್ಲಿಸಿ ಕೆರೆಗೆ ಹಾರಿದ ಯುವಕ – ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಕಾರ್ಯಾಚರಣೆ – ಶವ ಪತ್ತೆ|Crime news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯ ಬಳಿ ಯುವಕನೊಬ್ಬ ಬೈಕ್ ನಿಲ್ಲಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹುಂಚ ಸಮೀಪದ ಮುತ್ತಿನಕೆರೆ ಬಳಿ ಯುವಕನೊಬ್ಬ ತನ್ನ ಬೈಕ್ ಹಾಗೂ ಪಾದರಕ್ಷೆಗಳನ್ನು ಬಿಟ್ಟು ಕೆರೆಗೆ ಹಾರಿದ ಘಟನೆ ನಡೆದಿತ್ತು ಬೆಳಿಗ್ಗೆ ಬೈಕ್ ಹಾಗೂ ಪಾದರಕ್ಷೆಗಳನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೆರೆಯಲ್ಲಿ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಹಚ್ಚಿದ್ದಾರೆ. ಮೃತ…

Read More

ಚಿರತೆ ನೋಡಿ ಕಂಗೆಟ್ಟ ರೈತರು – ಹೆಜ್ಜೆ ಗುರುತು ಅಲ್ಲಗೆಳೆದ ಪ್ರಾಣಿ ತಜ್ಞರು – ಜಮೀನಿಗೆ ಹೋಗಲು ಭಯ ಪಡುವ ಸ್ಥಿತಿಯಲ್ಲಿ ರೈತ ಸಮೂಹ|leopard

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಮಸರೂರು ಮನ್ನಾ ಜಂಗಲಿಯಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಂಡಿದ್ದು ಇಂದು ಅಡಿಕೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ರೈತನು ಚಿರತೆ ಕಂಡು ಗಾಬರಿಯಿಂದ ಮನೆಗೆ ಓಡಿ ಬಂದ ಘಟನೆ ನಡೆದಿದೆ. ಅರಣ್ಯ ಇಲಾಖೆಯವರು ಅಲುವಳ್ಳಿ ಗ್ರಾಮದ ಗಾಳಿಬೈಲು ಬಳಿಯಲ್ಲಿ ಬೋನ್ ಇಡುವುದರೊಂದಿಗೆ ಚಿರತೆ ಹಿಡಿಯಲು ಮುಂಜಾಗ್ರತಾ ಕ್ರಮ ವಹಿಸಿದ್ದು ನಂತರ ಮಸರೂರು ತೋಟವೊಂದರಲ್ಲಿ ಪ್ರತ್ಯಕ್ಷವಾಗಿದೆ ಎಂಬ ಮಾಹಿತಿಯನ್ನಾದರಿಸಿ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಇಂದು ಮುಂಜಾನೆ…

Read More

ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹರಿದ ಟಿಪ್ಪರ್ ಲಾರಿ – ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ|CCTV

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ನಿನ್ನೆ ಬೆಳಗ್ಗೆಯೇ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಈ ಅಪಘಾತದಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಪ್ರತಿಮಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಇದೀಗ ಘಟನೆಯ ಸಿಸಿ ಟಿವಿ ದೃಶ್ಯವೊಂದು ಲಭ್ಯವಾಗಿದ್ದು, ದೃಶ್ಯದಲ್ಲಿ ಟ್ರಾಫಿಕ್​ನ ನಡುವೆ ಎಡಬದಿಯಲ್ಲಿ ನುಗ್ಗಿ ಬಂದ ಲಾರಿ, ತಮ್ಮ ಪಾಡಿಗೆ ರಸ್ತೆ ಬದಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿರುವ ದೃಶ್ಯ …

Read More

ಕೊರೊನಾ ನಾಲ್ಕನೇ ಅಲೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಲ್ಲ, ಆತಂಕ ಬೇಡ : ಕೋಡಿ ಮಠದ ಶ್ರೀಗಳು|kodimaTT

  ಕೊರೊನಾ ನಾಲ್ಕನೇ ಅಲೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ.ಕೊರೊನಾ ಬಂದು ಹೋಗುತ್ತದೆ. ಈ ಬಾರಿಯ ಕೊರೊನಾ ಅಷ್ಟೊಂದು ಪರಿಣಾಮ ಬೀರುವುದಿಲ್ಲ. ಈ ಬಾರಿ ಕೊರೊನಾದಿಂದ ಯಾವುದೇ ಸಾವು-ನೋವುಗಳು ಸಂಭವಿಸುವುದಿಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಬಗ್ಗೆ ಯಾರು ಕೂಡ ಆತಂಕ ಪಡುವ ಅವಶ್ಯಕೆತಯಿಲ್ಲ.ಈ ವರ್ಷ ಕಾರ್ತಿಕ ಮಾಸದಿಂದ ಜನವರಿವರೆಗೆ ಲೋಕ ಕಂಟಕವಿದೆ, ದೇಹ ಅಶಕ್ತಿಯಿಂದ ಬಿದ್ದು ಸಾಯುತ್ತವೆ. ಬಾಂಬ್‌ಗಳು, ಭೂಕಂಪ, ಯುದ್ದಭೀತಿ, ಜನ…

Read More

ರಿಪ್ಪನ್‌ಪೇಟೆ : ಚಿರತೆ ಇದೆ ಹುಷಾರ್…. ಎಂದು ಬುದ್ದಿವಾದ ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ|assault

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನಕೊಪ್ಪ ಗ್ರಾಮದಲ್ಲಿ ಚಿರತೆ ಇದೆ ಹುಷಾರು ಎಂದು ಹೇಳಿದ್ದಕ್ಕೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊನ್ನಕೊಪ್ಪ ಗ್ರಾಮದ ದಿನೇಶ್ (42) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 10-00 ಗಂಟೆ ಸುಮಾರಿಗೆ ತನ್ನ ಮಗನನ್ನು ಶಾಲಾ ಪ್ರವಾಸಕ್ಕೆ ಕಳುಹಿಸಲು ಅರಸಾಳು ಶಾಲೆಗೆ ಬಿಟ್ಟು ವಾಪಾಸ್ ಹಿಂದಿರುಗುತಿದ್ದ…

Read More

ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli

ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ…

Read More