Headlines

ರಿಪ್ಪನ್‌ಪೇಟೆಯಲ್ಲಿ ಹಾನಗಲ್ ಕುಮಾರೇಶ್ವರ ರಥಯಾತ್ರೆಗೆ ಅದ್ದೂರಿ ಸ್ವಾಗತ|Viraagi

ರಿಪ್ಪನ್‌ಪೇಟೆ : ಹಾನಗಲ್ ಶ್ರೀ ಗುರುಕುಮಾರೇಶ್ವರ ಶಿವಯೋಗಿಗಳ ಕುರಿತು ಜನವರಿ ೧೨ ರಂದು ಬಿಡುಗಡೆಯಾಗಲಿರುವ ವಿರಾಟಪುರ ವಿರಾಗಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ಶ್ರೀ ಕುಮಾರೇಶ್ವರ ರಥ ಯಾತ್ರೆ ನಾಡಿನ ವ್ಯಾಪ್ತಿ ಸಂಚರಿಸುತ್ತಿದ್ದು ಇಂದು ಅನಂದಪುರ ಮಾರ್ಗವಾಗಿ ರಥವು ರಿಪ್ಪನ್‌ಪೇಟೆಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸಾಗರ ರಸ್ತೆಯ ಒಕ್ಕಲಿಗರ ಸಮುದಾಯ ಭವನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಬೈಕ್ ರ‍್ಯಾಲಿ ಮೂಲಕ ವಿನಾಯಕ ವೃತ್ತದ ಮೂಲಕ ಭೂಪಾಳಂ ಚಂದ್ರಶೇಖರಯ್ಯ ಸಬಾಭವನಕ್ಕೆ ಕರೆ ತರಲಾಯಿತು. ಭೂಪಾಳಂ ಚಂದ್ರಶೇಖರಯ್ಯ ಸಬಾಭವನದಲ್ಲಿ ಹತ್ತು ನಿಮಿಷದ ಹಾನಗಲ್ ಕುಮಾರೇಶ್ವರ…

Read More

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More

ಲಗೇಜ್ ಆಟೋ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು,ಓರ್ವ ಗಂಭೀರ|Accident

ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.  ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹ ಸವಾರ ಮಂಜಪ್ಪ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ…

Read More

IPL Auction ನೆನಪಿಸುವಂತೆ ನಡೆದ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ಪ್ರಕ್ರಿಯೆ….!!!!!!!

ಹೆದ್ದಾರಿಪುರ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ರಿಕೆಟ್‌ ಪ್ರೀಮಿಯರ್ ಆಯೋಜನೆ ಗರಿಗೆದರತೊಡಗಿವೆ.  ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರದಲ್ಲಿ ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್(HPL) ಕ್ರಿಕೆಟ್ ಟೂರ್ನಿ ಆಯೋಜನೆಗೆ ಈಗ ಭರ್ಜರಿ ಚಾಲನೆ ಸಿಕ್ಕಿದ್ದು, ಭಾನುವಾರ ವೃತ್ತಿಪರ ಶೈಲಿಯಲ್ಲಿ ಐಪಿಎಲ್ ಹರಾಜು ನೆನಪಿಸುವಂತೆ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ನಡೆದಿದೆ. ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳುತ್ತಿದ್ದು,…

Read More

ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…

Read More

ನಾಳೆ(21-12-2022) ರಿಪ್ಪನ್‌ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi

ರಿಪ್ಪನ್‌ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ….

Read More

ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಬೊಮ್ಮಾಯಿ – ಆರ್ ಎಂ ಮಂಜುನಾಥ್ ಗೌಡ|DKS

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಬೊಮ್ಮಾಯಿ ಯಾಗಿದ್ದು,ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ಚಟುವಟಿಕೆಗಳ ಜೊತೆಗೆ ತನ್ನ ತಪ್ಪುಗಳನ್ನು ಮತ್ತು ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೆಪಿಸಿಸಿ ನಾಯಕರಾದ ಡಿ ಕೆ ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಯ ಮೇಲೆ ದಾಳಿ ನೆಡೆಸಿದ್ದಾರೆ ಎಂದು ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ಹೇಳಿದರು. ಕರ್ನಾಟಕ ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ರವರ ಶಿಕ್ಷಣ ಸಂಸ್ಥೆಯ ಮೇಲೆ ರಾಜಕೀಯ ದುರುದ್ದೇಶದಿಂದ…

Read More

ರಿಪ್ಪನ್‌ಪೇಟೆ : ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಜೈನರ ದಕ್ಷಿಣದ ಕಾಶಿ ಹೊಂಬುಜ ಮಠಕ್ಕೆ ತೆರಳುತಿದ್ದ ಭಕ್ತರ ಮಾರುತಿ ಸ್ವಿಫ್ಟ್ ಕಾರು (MH 14 GN 1943) ಹೆದ್ದಾರಿಪುರ ಸಮೀಪದ ಜಂಬಳ್ಳಿ ತಿರುವಿನಲ್ಲಿ ಪಲ್ಟಿಯಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಹಾರಾಷ್ಟ್ರ ರಾಜ್ಯದ ಪೂನ ನಗರದಿಂದ ಹೊಂಬುಜಾ ಮಠಕ್ಕೆ ಆಗಮಿಸುತಿದ್ದಾಗ ಇಂದು ಮುಂಜಾನೆ ಜಂಬಳ್ಳಿ ತಿರುವಿನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 4…

Read More

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರ ಸಾವು : ಕುಟುಂಬಸ್ಥರಿಂದ ಪ್ರತಿಭಟನೆ|Mescom

ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರನೊಬ್ಬ ಮೃತ ಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶಗೊಂಡ ಆತನ ಕುಟುಂಬಸ್ಥರು ಮತ್ತು ಎಣ್ಣೆಕೊಪ್ಪ ಗ್ರಾಮಸ್ಥರು ಮೆಸ್ಕಾಂ ಇಲಾಖೆಯ ಉಪ ವಿಭಾಗ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ತಾಲೂಕಿನ ಆನವಟ್ಟಿಯಲ್ಲಿ ಸೋಮವಾರ ನಡೆಯಿತು.  ಘಟನೆ ಹಿನ್ನೆಲೆ:  ಎಣ್ಣೆಕೊಪ್ಪ ಗ್ರಾಮದ ರವಿ ದುರ್ಗಪ್ಪ ಎಂಬ 24 ವರ್ಷದ ಯುವಕ ವಿದ್ಯುತ್ ಗುತ್ತಿಗೆದಾರರ ಬಳಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದನು. ಕುಬಟೂರು ಗ್ರಾಮದಲ್ಲಿ ಡಿ.17 ರಂದು…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…

Read More