w
Headlines
Home » ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ.




ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. 

ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ.




ಮಾರಾಟ ಮಾಡುವ ಉದ್ದೇಶದಿಂದಲೆ ಇವರು ಗಾಂಜಾ ಹೊಂದಿದ್ದರು ಎಂದು ಹೇಳಲಾಗುತ್ತಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಒಂದು ಮೊಬೈಲ್ ಫೋನ್ ಕೂಡ ವಶಪಡಿಸಿಕೊಳ್ಳಲಾಗಿದೆ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.