ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಹಾಗೂ ರಿಪ್ಪನ್ ಪೇಟೆ ಗ್ರಾಮಾಡಳಿತದಿಂದ ಚಿಕ್ಕಬೀರನ ಕೆರೆಗೆ ಕಾಯಕಲ್ಪ:
ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ…


